
ತಿಪಟೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ, ಎನ್‌ಎಸ್‌ಎಸ್, ಎನ್‌ಸಿಸಿ, ಯುವ ರೆಡ್‌ಕ್ರಾಸ್, ರೆಡ್ ರಿಬ್ಬನ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ಷಡಕ್ಷರಿ, ಶಿಕ್ಷಣ ಪ್ರತಿಯೊಬ್ಬರ ಹಕ್ಕು, ಅದನ್ನು ಎಲ್ಲರಿಗೂ ಕೊಡಿಸುವ ಜವಾಬ್ದಾರಿ ನಮ್ಮದು. ಜಾಗದ ಕೊರತೆ ಕಾರಣ ರಂಗಾಪುರದ ಪಕ್ಕದಲ್ಲಿ 16 ಎಕರೆ ಜಾಗದಲ್ಲಿ ನೂತನವಾಗಿ ಸ್ನಾತಕೋತ್ತರ ಕೇಂದ್ರ ಶೀಘ್ರ ಉದ್ಘಾಟನೆಯಾಗಲಿದೆ. ಇದರ ಜೊತೆಗೆ ನೂತನ ಕೋರ್ಸ್‌ಗಳನ್ನು ತರಲಾಗುವುದು ಎಂದರು.
ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಆರ್.ಚೇತನ್ ಮಾತನಾಡಿ, ಓದಿನ ಜೊತೆಗೆ ಕ್ರೀಡೆ ಎನ್‌ಎಸ್‌ಎಸ್ ಮತ್ತು ಎನ್‌ಸಿಸಿ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ವ್ಯಕ್ತಿತ್ವದ ಜೊತೆಗೆ ಜ್ಞಾನ ಸಂಪಾದಿಸಿಕೊಂಡರೆ ಜೀವನದಲ್ಲಿ ಯಶಸ್ಸು ಸಾಧ್ಯ ಎಂದರು.
ಟಿ.ನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಚ್.ವಿ. ಉದಯ್‌ಕುಮಾರ್, ಪ್ರಾಂಶುಪಾಲ ಶಶಿಕುಮಾರ್ ಎಚ್.ಸಿ. ಮಾತನಾಡಿದರು.
ಕಾಲೇಜು ವಿದ್ಯಾರ್ಥಿಗಳ ಪೋಷಕ ಸಂಘದ ಅಧ್ಯಕ್ಷ ಬಿಲ್ಲೆಮನೆ ಚಂದ್ರಶೇಖರ್, ಮಲಿಗಪ್ಪಚಾರ್, ಉಪನ್ಯಾಸಕರಾದ ಶಿವಕುಮಾರ್, ನಾಗರಾಜು, ಸುಭದ್ರಮ್ಮ, ಓಹಿಲಾ, ಸ್ಮಿತಾ, ಶಂಕರ್, ಶಶಿಕುಮಾರ್, ಸುರೇಶ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.