ತಿಪಟೂರು: ನಗರದ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮೇಕಥಾನ್– 2025ರಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತುಮಕೂರಿನ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇನ್ಯೂನಿಟಿ ಮತ್ತು ಟೈಟನ್ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಮೇಕಥಾನ್ ತಾಂತ್ರಿಕ ಸ್ಪರ್ಧೆಯಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ವಿಶ್ವನಾಥ್ ಬಿ.ಎಂ. ಹಾಗೂ ಸಹ ಪ್ರಾಧ್ಯಾಪಕ ಹರಿಕೇಶ ಸಿ.ಆರ್. ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಸಂಜು ಕೆ.ಎಸ್., ಚಿದಾನಂದ ಪಿ., ಗಣೇಶ್ ಎಂ.ಎ. ಮತ್ತು ಜೀವನ್ ಎಸ್.ಕೆ. ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ತಂಡವು ‘ಸಣ್ಣ ಉದ್ದದ ಲೂಮ್‌ನ (ಮಗ್ಗ) ವಿನ್ಯಾಸ ಮತ್ತು ಅಭಿವೃದ್ಧಿ’ ವರದಿ ಮಂಡಿಸಿ ₹10 ಸಾವಿರ ನಗದು ಬಹುಮಾನ ಪಡೆದಿದ್ದಾರೆ. 2026ರ ಜನವರಿಯಲ್ಲಿ ಹೈದರಾಬಾದ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಎಚ್.ಸಿ. ಸತೀಶ್‌ಕುಮಾರ್, ಸಂಸ್ಥೆ ಅಧ್ಯಕ್ಷ ಪಿ.ಕೆ ತಿಪ್ಪೆರುದ್ರಪ್ಪ, ಖಜಾಂಚಿ ಟಿ.ಎಸ್.ಶಿವಪ್ರಸಾದ್, ಉಪಾಧ್ಯಕ್ಷರಾದ ಬಾಗೇಪಲ್ಲಿ ನಟರಾಜ್, ಜಿ.ಪಿ.ದೀಪಕ್, ಬಿ.ಎಸ್.ಉಮೇಶ್, ಟಿ.ಎಸ್. ಬಸವರಾಜು ಹಾಗೂ ಕಾರ್ಯದರ್ಶಿಗಳಾದ ಜಿ.ಎಸ್. ಉಮಶಂಕರ್, ಎಂ.ಆರ್. ಸಂಗಮೇಶ್, ಎಚ್.ಜಿ.ಸುಧಾಕರ್, ಟಿ.ಯು.ಜಗದೀಶ್‌ಮೂರ್ತಿ ಹಾಗೂ ವಿವಿಧ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಪಾಲ್ಗೊಳ್ಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.