
ತಿಪಟೂರು: ನಗರದ ಗಾಂಧಿನಗರ ಪಕ್ಕದಲ್ಲಿರುವ ಮಾರನಗೆರೆಯಲ್ಲಿ ತೋಟದ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಮತ್ತು ಗ್ರಾಮಸ್ಥರ ಜಂಟಿ ಕಾರ್ಯಾಚರಣೆಯಿಂದ ರಕ್ಷಿಸಲಾಗಿದೆ.
ಶನಿವಾರ ಬೆಳಗ್ಗೆ ಬಾವಿಯಲ್ಲಿ ಚಿರತೆಯನ್ನು ಕಂಡು ಗ್ರಾಮಸ್ಥರು ಆತಂಕಕ್ಕೀಡಾಗಿದ್ದರು. ಈ ಕುರಿತು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಆದರೆ, ಮಧ್ಯಾಹ್ನದವರೆಗೆ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಾರದೆ ಇರುವುದರಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.
ಮಧ್ಯಾಹ್ನದ ಬಳಿಕ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮಸ್ಥರ ಸಹಕಾರದೊಂದಿಗೆ ಬಾವಿಯೊಳಗೆ ಬಲೆ ಹಾಕಿ ಚಿರತೆಯನ್ನು ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.
ಚಿರತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬಳಿಕ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.