
ಪ್ರಜಾವಾಣಿ ವಾರ್ತೆ
ತಿಪಟೂರು: ಒಂದು ದಿನದ ಅಧಿಕಾರಕ್ಕಾಗಿ ನಡೆಯುತ್ತಿರುವ ತಿಪಟೂರು ನಗರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಿದ್ದಾರೆ.
ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಸದಸ್ಯರಾದ ಎಂ.ಎಸ್.ಓಹಿಲಾ, ಎಂ.ಎಸ್.ಅಶ್ವಿನಿ ನಾಮಪತ್ರ ಸಲ್ಲಿಸಿದ್ದಾರೆ. ಒಂದೇ ಪಕ್ಷದ ಇಬ್ಬರು ಸ್ಪರ್ಧೆ ಮಾಡಿರುವುದು ಕುತೂಹಲ ಮೂಡಿಸಿದೆ. ಕಾಂಗ್ರೆಸ್‌ನಿಂದ ಯಾರೊಬ್ಬರೂ ಕಣದಲ್ಲಿ ಇಲ್ಲ. ಎಂ.ಎಸ್.ಅಶ್ವಿನಿ ಶಾಸಕ ಕೆ.ಷಡಕ್ಷರಿ ಜತೆಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದು ಅಚ್ಚರಿ ಮೂಡಿಸಿತು.
ತಿಪಟೂರು ನಗರಸಭೆ ಅಧಿಕಾರಾವಧಿ ಅ. 30ಕ್ಕೆ ಮುಕ್ತಾಯವಾಗಲಿದೆ. ಚುನಾವಣೆಯಲ್ಲಿ ಆಯ್ಕೆಯಾಗುವ ಅಧ್ಯಕ್ಷರಿಗೆ ಕೇವಲ ಒಂದು ದಿನ ಮಾತ್ರ ಅಧಿಕಾರ ಸಿಗಲಿದೆ. ನಗರಸಭಾ ಅಧ್ಯಕ್ಷರಾಗಿದ್ದ ಎ.ಎಸ್.ಯಮುನಾ ಸೆ. 24 ರಂದು ರಾಜೀನಾಮೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.