ADVERTISEMENT

ತಿಪಟೂರು: ಮಚ್ಚಿನಿಂದ ತಲೆಗೆ ಹೊಡೆದು ವ್ಯಕ್ತಿ ಕೊಲೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2026, 12:45 IST
Last Updated 20 ಫೆಬ್ರುವರಿ 2026, 12:45 IST
   

ತಿಪಟೂರು: ತಾಲ್ಲೂಕಿನ ಕೋಡಿಹಳ್ಳಿ ಬೋವಿ ಕಾಲೊನಿಯಲ್ಲಿ ಶುಕ್ರವಾರ ಮಚ್ಚಿನಿಂದ ತಲೆಗೆ ಹೊಡೆದು ಪುಟ್ಟರಾಜು (37) ಎಂಬುವರನ್ನು ಹತ್ಯೆ ಮಾಡಲಾಗಿದೆ.

ಪುಟ್ಟರಾಜು ಚಿಕ್ಕಮಗಳೂರು ಜಿಲ್ಲೆಯ ಬೀರೂರಿನವರು ಎಂದು ಗೊತ್ತಾಗಿದೆ. ವೆಲ್ಡಿಂಗ್‌ ಕೆಲಸ ಮಾಡಿಕೊಂಡಿದ್ದರು. ಕೊಲೆಗೆ ಕಾರಣ ತಿಳಿದು ಬಂದಿಲ್ಲ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ವಿ.ಅಶೋಕ್‌, ಡಿವೈಎಸ್‌ಪಿ ಜಯಲಕ್ಷಮ್ಮ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.