ADVERTISEMENT

ಪ್ರಥಮ ಚಿಕಿತ್ಸಾ ಪೆಟ್ಟಿಗೆ ವಿತರಣೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2025, 15:04 IST
Last Updated 27 ಏಪ್ರಿಲ್ 2025, 15:04 IST
ತಿಪಟೂರು ಕ್ಷೇತ್ರ ಸಂಪನ್ಮೂಲ ಕಚೇರಿಯಲ್ಲಿ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯಿಂದ ಸರ್ಕಾರಿ ಪ್ರೌಢಶಾಲೆಗಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ವಿತರಿಸಲಾಯಿತು
ತಿಪಟೂರು ಕ್ಷೇತ್ರ ಸಂಪನ್ಮೂಲ ಕಚೇರಿಯಲ್ಲಿ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯಿಂದ ಸರ್ಕಾರಿ ಪ್ರೌಢಶಾಲೆಗಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ವಿತರಿಸಲಾಯಿತು   

ಪ್ರಜಾವಾಣಿ ವಾರ್ತೆ

ತಿಪಟೂರು: ತಾಲ್ಲೂಕಿನ ಕ್ಷೇತ್ರ ಸಂಪನ್ಮೂಲ ಕಚೇರಿಯಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ತಿಪಟೂರು ಶಾಖೆಯಿಂದ ಸರ್ಕಾರಿ ಪ್ರೌಢಶಾಲೆಗಳಿಗೆ ಪ್ರಾರಂಭಿಕ ಹಂತದ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ವಿತರಿಸಲಾಯಿತು.

ಚಿಕಿತ್ಸಾ ಪೆಟ್ಟಿಗೆಗಳನ್ನು ವಿತರಿಸಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ವೈದ್ಯ ಸಂಜಯ್, ಶೈಕ್ಷಣಿಕ ವರ್ಷದಲ್ಲಿ ತಾಲ್ಲೂಕಿನ ಸರ್ಕಾರಿ ಶಾಲೆಗಳ ಮಕ್ಕಳ ಅರೋಗ್ಯ ಹಾಗೂ ಶೈಕ್ಷಣಿಕ ಅಭಿವೃದ್ಧಿ ಕಡೆಗೆ ಹಾಗೂ ಮೂಲ ಸೌಲಭ್ಯಗಳ ಕೊರತೆ ಬಗ್ಗೆ ಗಮನ ನೀಡಿ ಉತ್ತಮ ಶಾಲಾ ವಾತಾವರಣ ನಿರ್ಮಾಣ ಉದ್ದೇಶದಿಂದ ಈ ಪರಿಕರಗಳನ್ನು ವಿತರಿಸಲಾಗಿದೆ ಎಂದರು.

ADVERTISEMENT

ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ ಜಿ. ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆ ಸರ್ಕಾರಿ ಶಾಲೆಗಳ ಮಕ್ಕಳ ಹಿತದೃಷ್ಟಿಯಿಂದ ಚಿಕಿತ್ಸಾ ಪೆಟ್ಟಿಗೆಗಳನ್ನು ನೀಡುತ್ತಿರುವುದು ಶ್ಲಾಘನೀಯ. ಇದರ ಸದುಪಯೋಗವನ್ನು ಶಿಕ್ಷಕರು ಮಕ್ಕಳಿಗೆ ತಲುಪಿಸುವ ನಿಟ್ಟಿನಲ್ಲಿ ಜಾಗೃತರಾಗಬೇಕು ಎಂದರು.

ಸಂಸ್ಥೆ ಕಾರ್ಯದರ್ಶಿ ವಿದ್ಯಾನಂದ್, ಮಂಜುನಾಥ, ಪ್ರತಿನಿದಿಗಳಾದ ಪೂರ್ಣಿಮಾ, ಜಯಲಕ್ಷ್ಮಿ, ಕ್ಷೇತ್ರ ಸಂಪನ್ಮೂಲ ಕಚೇರಿಯ ದಕ್ಷಿಣಮೂರ್ತಿ, ಶಿಕ್ಷಣ ಸಂಯೋಜಕರಾದ ಮಂಜುನಾಥ, ಶ್ಯಾಮಸುಂದರ್, ಉಪಪ್ರಾಂಶುಪಾಲ ಚನ್ನೇಗೌಡ ಉಪಸ್ಥಿತರಿದ್ದರು.

ನಗರದ ಕ್ಷೇತ್ರ ಸಂಪನ್ಮೂಲ ಕಚೇರಿಯಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿವತಿಯಿಂದ ಸರ್ಕಾರಿ ಪ್ರೌಢಶಾಲೆಗಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ವೈಧ್ಯ ಸಂಜಯ್ ಬಿಇಓ ಚಂದ್ರಯ್ಯ.ಜಿ ವಿತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.