ADVERTISEMENT

ತಿಪಟೂರು | 'ಗ್ಯಾರಂಟಿಯಿಂದ ಅಭಿವೃದ್ಧಿ ಶೂನ್ಯ'

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 14:16 IST
Last Updated 22 ಜೂನ್ 2025, 14:16 IST

ತಿಪಟೂರು: ತಾಲ್ಲೂಕಿನಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಸ್ವಂದಿಸದೆ ಖಾತೆಗಳ ಬದಲಾವಣೆಗಳು ಆಗುತ್ತಿಲ್ಲ. ಗ್ಯಾರಂಟಿ ಯೋಜನೆಯಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಹೆಸರು ಬದಲಾವಣೆ ಸೂಕ್ತವಲ್ಲ ಎಂದರು.

ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರು ಸಿಗದೆ, ತಾಲ್ಲೂಕಿನ ಹಾಲ್ಕುರಿಕೆ, ಬಳವನೇರಲು ಸೇರಿದಂತೆ ಗ್ರಾಮಾಂತರ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸರಿಯಾಗಿ ವೈದ್ಯರು ಕರ್ತವ್ಯ ನಿರ್ವಹಿಸದಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಪೊಲೀಸ್‌ ಇಲಾಖೆ ರೈತರ ಟ್ರ್ಯಾಕ್ಟರ್‌ಗಳನ್ನು ತಡೆಹಿಡಿದು ದಂಡ ಹಾಗೂ ಪ್ರಕರಣ ಹಾಕಲಾಗುತ್ತಿದೆ. ಈ ಬಗ್ಗೆ ಡಿವೈಎಸ್‌ಪಿ ಗಮನಹರಿಸಬೇಕು ಎಂದು ಮನವಿ ಮಾಡಿದರು.

ADVERTISEMENT

ತಾಲ್ಲೂಕಿನಲ್ಲಿ ಜೆಡಿಎಸ್ ಸಂಘಟನೆ ಬಲಿಷ್ಠವಾಗಿದ್ದು, ವರಿಷ್ಠರು ಕೈಗೊಂಡಿರುವ ಜೆಡಿಎಸ್ ಆನ್‌ಲೈನ್ ನೋಂದಣಿ ಸದಸ್ಯತ್ವಕ್ಕೆ ಚಾಲನೆ ನೀಡಲಾಗಿದೆ. ಜೆಡಿಎಸ್ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ಮುಂಬರುವ ಜಿ.ಪಂ, ತಾ.ಪಂ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನಿಖಿಲ್‌ ಕುಮಾರಸ್ವಾಮಿ ಪ್ರವಾಸದ ದಿನವನ್ನು ನಿಗದಿ ಮಾಡಲಾಗುವುದು ಎಂದು ಹೇಳಿದರು.

ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ನೆರವು ನೀಡುವ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುವುದು. ನೆರವು ಬಯಸುವ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಳ್ಳಬಹುದು ಎಂದಿದ್ದಾರೆ.

ಗೋಷ್ಠಿಯಲ್ಲಿ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಮತ್ತಿಘಟ್ಟ ಶಿವಸ್ವಾಮಿ, ಯುವ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸುದರ್ಶನ್ ಗೊರಗೊಂಡನಹಳ್ಳಿ ಹಾಗೂ ಸ್ಥಳೀಯರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.