ADVERTISEMENT

ದಿನ ದಿನವೂ ಹೆಚ್ಚುತ್ತಿದೆ ಕೊರೊನಾ

ಭಾನುವಾರ ಮತ್ತೆ 104 ಮಂದಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 26 ಜುಲೈ 2020, 16:45 IST
Last Updated 26 ಜುಲೈ 2020, 16:45 IST

ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಭಾನುವಾರ 104 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 1214ಕ್ಕೆ ಏರಿಕೆಯಾಗಿದೆ.

ತುಮಕೂರು ಅತಿ ಹೆಚ್ಚು ಸೋಂಕಿತರು ಹೊಂದಿರುವ ತಾಲ್ಲೂಕು ಎನಿಸಿಕೊಂಡಿದೆ. ಇಲ್ಲಿ ಸೋಂಕಿತರ ಸಂಖ್ಯೆ 519ಕ್ಕೆ ಏರಿಕೆಯಾಗಿದೆ. ಭಾನುವಾರವೂ 50 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ, ತುಮಕೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದಷ್ಟೇ ವೇಗವಾಗಿ ಗುಣಮುಖರಾಗುತ್ತಿರುವ ಸಂಖ್ಯೆಯೂ ಹೆಚ್ಚುತ್ತಿದೆ. ಭಾನುವಾರವೂ 12 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ತಾಲ್ಲೂಕಿನಲ್ಲಿ 240 ಮಂದಿ ಗುಣಮುಖರಾಗಿ ಮನೆಗಳಿಗೆ ಹಿಂದಿರುಗಿದ್ದಾರೆ.

ಕಳೆದ 15 ದಿನಗಳಿಂದ ಪ್ರತಿದಿನವೂ ಒಬ್ಬರಾದರೂ ಮೃತಪಡುತ್ತಿದ್ದರು. ಭಾನುವಾರ ಸಾವಿನ ಪ್ರಕರಣಗಳು ವರದಿಯಾಗಿಲ್ಲ. ಭಾನುವಾರ ದೃಢಪಟ್ಟ ಸೋಂಕಿತರದಲ್ಲಿ 54 ಮಂದಿ ಪುರುಷರು ಹಾಗೂ 50 ಮಂದಿ ಮಹಿಳೆಯರಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 30,911 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 27,106 ವರದಿಗಳು ನೆಗೆಟಿವ್‌ ಬಂದಿದೆ. ಪ್ರಸ್ತುತ ಜಿಲ್ಲೆಯಲ್ಲಿ 560 ಸಕ್ರಿಯ ಪ್ರಕರಣಗಳು ಇವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.