ADVERTISEMENT

‘ಕೋವಿಶೀಲ್ಡ್’ ಲಸಿಕೆ ಇಂದು

​ಪ್ರಜಾವಾಣಿ ವಾರ್ತೆ
Published 16 ಜನವರಿ 2021, 3:26 IST
Last Updated 16 ಜನವರಿ 2021, 3:26 IST
ಕೋವಿಶೀಲ್ಡ್‌ ಲಸಿಕೆ
ಕೋವಿಶೀಲ್ಡ್‌ ಲಸಿಕೆ   

ತುಮಕೂರು: ಜಿಲ್ಲೆಯ 13 ಸ್ಥಳಗಳಲ್ಲಿ ಆರೋಗ್ಯ ಕಾರ್ಯಕರ್ತೆಯರಿಗೆ ಶನಿವಾರದಿಂದ ಕೋವಿಡ್ ಲಸಿಕೆ ನೀಡಲಾಗುತ್ತದೆ. ನಗರದ ಜಿಲ್ಲಾ ಆಸ್ಪತ್ರೆ, ಕೋತಿ ತೋಪಿನ ಪ್ರಾಥಮಿಕ ಆರೋಗ್ಯ ಕೇಂದ್ರ, ಕ್ಯಾತ್ಸಂದ್ರದ ಪ್ರಾಥಮಿಕ ಆರೋಗ್ಯ ಕೇಂದ್ರ, ಶ್ರೀದೇವಿ ಕಾಲೇಜು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಲಸಿಕೆ ಕೊಡಲಾಗುತ್ತದೆ.

ಲಸಿಕೆ ನೀಡುವ ಪ್ರತಿ ಕೇಂದ್ರಕ್ಕೂ ಈಗಾಗಲೇ 100 ಡೋಸ್ ‘ಕೋವಿಶೀಲ್ಡ್’ ಲಸಿಕೆಯನ್ನು ಜಿಲ್ಲಾ ಆರೋಗ್ಯ ಇಲಾಖೆ ಪೂರೈಸಿದೆ. ಶನಿವಾರ 1,211 ಮಂದಿಗೆ ಲಸಿಕೆ ನೀಡಲಾಗುತ್ತದೆ. ಮತ್ತೆ ಸೋಮವಾರ ಲಸಿಕೆ ನೀಡಲಾಗುತ್ತದೆ. ಹೀಗೆ ವೈದ್ಯರು, ಶುಶ್ರೂಷಕರು ಸೇರಿದಂತೆ ಆರೋಗ್ಯ ಕಾರ್ಯಕರ್ತೆಯರು ಇಂತಹ ಕೇಂದ್ರಗಳಲ್ಲಿ ಲಸಿಕೆ ಪಡೆಯಬೇಕು ಎಂದು ಸೂಚಿಸಲಾಗಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಲಸಿಕೆ ಪಡೆಯಲು ಒಟ್ಟು 24,040 ಮಂದಿ ಆರೋಗ್ಯ ಕಾರ್ಯಕರ್ತರು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಸರ್ಕಾರದ ಮುಂದಿನ ಮಾರ್ಗಸೂಚಿಗಳನ್ನು ನೋಡಿಕೊಂಡು ಲಸಿಕೆ ನೀಡಲಾಗುವುದು. ಮತ್ತಷ್ಟು ಲಸಿಕೆ ಜಿಲ್ಲೆಗೆ ಪೂರೈಕೆ ಆಗಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈಗಾಗಲೇ ಲಸಿಕೆಯನ್ನು ಸಂಗ್ರಹ ಕೊಠಡಿಯಲ್ಲಿ ಇರಿಸಲಾಗಿದ್ದು ಪೊಲೀಸ್ ಭದ್ರತೆ ಒದಗಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.