ADVERTISEMENT

ಟ್ರ್ಯಾಕ್ಟರ್ ಬಿದ್ದ ಪ್ರಕರಣ: ನಿಮ್ಹಾನ್ಸ್‌ಗೆ ಇಬ್ಬರು ದಾಖಲು

​ಪ್ರಜಾವಾಣಿ ವಾರ್ತೆ
Published 12 ಮೇ 2019, 20:16 IST
Last Updated 12 ಮೇ 2019, 20:16 IST
ತುಮಕೂರಿನಲ್ಲಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವನ್ನು ಭಾನುವಾರ ಶಾಸಕ ಜೆ.ಸಿ.ಮಾಧುಸ್ವಾಮಿ ವಿಚಾರಿಸಿದರು
ತುಮಕೂರಿನಲ್ಲಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವನ್ನು ಭಾನುವಾರ ಶಾಸಕ ಜೆ.ಸಿ.ಮಾಧುಸ್ವಾಮಿ ವಿಚಾರಿಸಿದರು   

ತುಮಕೂರು: ‘ತಿ‍ಪಟೂರು ಬಳಿ ಶನಿವಾರ ಸಂಜೆ ಕೆ.ಬಿ.ಕ್ರಾಸ್ ಬಳಿ ಹತ್ಯಾಳು ನರಸಿಂಹಸ್ವಾಮಿ ಬೆಟ್ಟದಲ್ಲಿ ಟ್ರ್ಯಾಕ್ಟರ್ ಉರುಳಿ ಬಿದ್ದು ಗಾಯಗೊಂಡವರಲ್ಲಿ ಇಬ್ಬರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಅಧೀಕ್ಷಕ ಡಾ.ವೀರಭದ್ರಯ್ಯ ಹೇಳಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಲು ಚಿಕ್ಕನಾಯಕನಹಳ್ಳಿ ಶಾಸಕ ಜೆ.ಸಿ.ಮಾಧುಸ್ವಾಮಿ ಭೇಟಿ ನೀಡಿದ ವೇಳೆ ಮಾಹಿತಿ ನೀಡಿದರು.

ಭುವನ್ (6), ಗಂಗಮ್ಮ (40) ಎಂಬ ಮಗು ಮತ್ತು ತಾಯಿಗೆ ತಲೆಗೆ ಪೆಟ್ಟಾಗಿತ್ತು. ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ನಿಮ್ಹಾನ್ಸ್‌ಗೆ ಕಳಿಸಲಾಗಿದೆ. ಇನ್ನುಳಿದ ಗಾಯಾಳುಗಳಲ್ಲಿ 9 ಮಂದಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಹೇಳಿದರು.

ADVERTISEMENT

ಪರಿಹಾರ: ಶನಿವಾರ ನಡೆದ ಘಟನೆ ದುರದೃಷ್ಟಕರವಾದುದು. ಅಪಘಾತದಲ್ಲಿ ಮೃತಪಟ್ಟವರೆಲ್ಲ ಬಡಕುಟುಂಬದವರು. ಗಾಯಾಳುಗಳು ಇಂತಹದ್ದೇ ಕುಟುಂಬದವರಾಗಿದ್ದಾರೆ. ಕುಟುಂಬದವರಿಗೆ ಪರಿಹಾರ ದೊರಕಿಸಲು ಸರ್ಕಾರದ ಗಮನ ಸೆಳೆಯಲಾಗುವುದು. ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ’ ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.