ತುಮಕೂರಿನಲ್ಲಿ ಶನಿವಾರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ರಾಷ್ಟ್ರೀಯ ವರ್ತಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ವರ್ತಕರ ಸಮಾವೇಶ ಆಯೋಜಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, ಮಂಡಳಿಯ ಅಧ್ಯಕ್ಷ ಸುನಿಲ್ ಸಿಂಘಿ ಉಪಸ್ಥಿತರಿದ್ದರು
ತುಮಕೂರು: ವ್ಯಾಪಾರಸ್ಥ ಕಾರ್ಮಿಕರಿಗೆ ₹5 ಲಕ್ಷದವರೆಗೆ ಆರೋಗ್ಯ ವಿಮೆ, 60 ವರ್ಷ ದಾಟಿದ ವ್ಯಾಪಾರಸ್ಥರಿಗೆ ₹3 ಸಾವಿರ ಪಿಂಚಣಿ ನೀಡಲಾಗುವುದು ಎಂದು ರಾಷ್ಟ್ರೀಯ ವರ್ತಕರ ಕಲ್ಯಾಣ ಮಂಡಳಿ ಅಧ್ಯಕ್ಷ ಸುನಿಲ್ ಸಿಂಘಿ ತಿಳಿಸಿದರು.
ನಗರದಲ್ಲಿ ಶನಿವಾರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ರಾಷ್ಟ್ರೀಯ ವರ್ತಕರ ಕಲ್ಯಾಣ ಮಂಡಳಿಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವರ್ತಕರ ಸಮಾವೇಶದಲ್ಲಿ ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, ‘ಬೆಂಗಳೂರಿನ ನಂತರ ಜಿಲ್ಲೆ ವೇಗವಾಗಿ ಬೆಳೆಯುತ್ತಿದೆ. ತುಮಕೂರಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ವರ್ತಕರ ಎಲ್ಲ ಬೇಡಿಕೆಗಳ ಕುರಿತು ಸಂಬಂಧಪಟ್ಟವರ ಜತೆ ಚರ್ಚಿಸಲಾಗುವುದು’ ಎಂದು ಭರವಸೆ ನೀಡಿದರು.
ಮಂಡಳಿಯ ಸದಸ್ಯ ಪ್ರಕಾಶ್ ಫಿರ್ಗಲ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿ.ಪಂ ಸಿಇಒ ಜಿ.ಪ್ರಭು, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಟಿ.ಜೆ.ಗಿರೀಶ್ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.