ADVERTISEMENT

ತುಮಕೂರು | ಸಂಚಾರ ನಿಯಮ ಉಲ್ಲಂಘನೆ: ದಂಡ ಪಾವತಿಗೆ ಆನ್‌ಲೈನ್‌ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2026, 7:11 IST
Last Updated 4 ಜನವರಿ 2026, 7:11 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ತುಮಕೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಆನ್‌ಲೈನ್‌ ವ್ಯವಸ್ಥೆ ಮಾಡಲಾಗಿದೆ.

ವಾಹನ ಸವಾರರು https://echallan.parivahan.gov.in/index/accused-challan ವೆಬ್‌ಸೈಟ್‌ನಲ್ಲಿ ಮೊಬೈಲ್‌ ಸಂಖ್ಯೆ ಅಥವಾ ಚಲನ್‌ ಸಂಖ್ಯೆ ನಮೂದಿಸಿ ದಂಡದ ಮೊತ್ತ ಪಾವತಿಸಬಹುದು.

ADVERTISEMENT

‘ನಾಗರಿಕರಿಗೆ ಸುಲಭ, ವೇಗ ಹಾಗೂ ಪಾರದರ್ಶಕ ಸೇವೆ ಒದಗಿಸುವ ಉದ್ದೇಶದಿಂದ ಆನ್‌ಲೈನ್‌ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಯುಪಿಐ, ಕ್ರೆಡಿಟ್‌ ಕಾರ್ಡ್‌ ಅಥವಾ ಡೆಬಿಟ್‌ ಕಾರ್ಡ್‌ ಬಳಸಿ ಮನೆಯಲ್ಲೇ ಕುಳಿತು ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ವಿ.ಅಶೋಕ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.