ADVERTISEMENT

ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರ ಒಂದು ಬದಿಯಲ್ಲಿ ವಾಹನ ಸಂಚಾರ ನಿಷೇಧ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2024, 3:21 IST
Last Updated 15 ಸೆಪ್ಟೆಂಬರ್ 2024, 3:21 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ತುಮಕೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.15ರಂದು ಜಿಲ್ಲೆಯಲ್ಲಿ 90 ಕಿ.ಮೀ ಉದ್ದದ ಬೃಹತ್‌ ಮಾನವ ಸರಪಳಿ ಏರ್ಪಡಿಸಿದ್ದು, ರಾಷ್ಟ್ರೀಯ ಹೆದ್ದಾರಿ 48ರ ಒಂದು ಬದಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಆದೇಶ ಹೊರಡಿಸಿದ್ದಾರೆ.

ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ವರೆಗೆ ಶಿರಾ ತಾಲ್ಲೂಕಿನ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲ್ಲೂಕಿನ ನಂದಿಹಳ್ಳಿ ಗ್ರಾಮದ ವರೆಗೆ ಹೆದ್ದಾರಿಯ ಎಡ ಬದಿಯ ರಸ್ತೆ ಬಂದ್‌ ಆಗಲಿದೆ. ಬೆಂಗಳೂರಿನಿಂದ ಚಿತ್ರದುರ್ಗದ ಕಡೆಗೆ ಹೋಗುವ, ಚಿತ್ರದುರ್ಗದಿಂದ ಬೆಂಗಳೂರಿನ ಕಡೆಗೆ ಸಂಚರಿಸುವ ವಾಹನಗಳು ರಸ್ತೆಯ ಬಲ ಭಾಗದಲ್ಲಿ ಹೋಗಲು ಅವಕಾಶ ಕಲ್ಪಿಸಿದೆ.

ADVERTISEMENT

‘ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯ ಸಾರ್ವಜನಿಕರು ಮಾನವ ಸರಪಳಿಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಇದರಿಂದಾಗಿ ಹೆದ್ದಾರಿಯ ಒಂದು ಬದಿಯಲ್ಲಿ ವಾಹನಗಳ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ’ ಎಂದು ಶುಭ ಕಲ್ಯಾಣ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.