ತುಮಕೂರು: ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆಯಿಂದ ಲಾಕ್‌ಡೌನ್ ತೆರವಾಗಿದ್ದು, ಎಲ್ಲಾ ರೀತಿಯ ವಾಣಿಜ್ಯ ಚಟುವಟಿಕೆಗಳು ಗರಿಗೆದರಿವೆ. ಪ್ರಮುಖವಾಗಿ ಬಸ್ ಸಂಚಾರ ಆರಂಭವಾಗಿದ್ದು, ಪ್ರಯಾಣಿಕರ ದಟ್ಟಣೆ ಕಂಡುಬಂತು.
ಬೆಳಿಗ್ಗೆ ನಗರ ಸಾರಿಗೆ ಬಸ್‌ಗಳಲ್ಲಿ ಜನರ ಸಂಚಾರ ಅಷ್ಟಾಗಿ ಇರಲಿಲ್ಲ. 9 ಗಂಟೆಯ ನಂತರ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಆದರೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಬೆಳಿಗ್ಗೆಯಿಂದಲೇ ದಟ್ಟಣೆ ಕಂಡುಬಂತು. ಅದರಲ್ಲೂ ಬೆಂಗಳೂರು ಮಾರ್ಗದಲ್ಲಿ ಹೆಚ್ಚಿನ ಜನರು ಸಂಚರಿಸಿದರು.
ನಗರದಲ್ಲಿ ಎಲ್ಲಾ ರೀತಿಯ ವ್ಯಾಪಾರ ವಹಿವಾಟು ಆರಂಭವಾಗುತ್ತಿದ್ದು, ನಿಧಾನವಾಗಿ ಜನರು ಖರೀದಿಯತ್ತ ಮುಖ ಮಾಡುತ್ತಿದ್ದಾರೆ. ಆಟೊ ಸಂಚಾರ ಮಾಮೂಲಿನಂತಿದ್ದು, ಜನ ಸಂಚಾರ ಹೆಚ್ಚಾಗಿತ್ತು. ಸಾಕಷ್ಟು ಮಂದಿ ಕೋವಿಡ್ ಆತಂಕದಲ್ಲೇ ಮನೆಯಿಂದ ಹೊರಬರುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.