ADVERTISEMENT

ತುಮಕೂರು: ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2020, 5:39 IST
Last Updated 13 ಡಿಸೆಂಬರ್ 2020, 5:39 IST
ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ
ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ   

ತುಮಕೂರು: ತುಮಕೂರಿನಿಂದ ಗುಬ್ಬಿಗೆ ಭಾನುವಾರ ಬೆಳಿಗ್ಗೆ ಪೊಲೀಸ್ ಭದ್ರತೆ ಯಲ್ಲಿ ಬಸ್ ಸಂಚಾರ ಆರಂಭವಾಯಿತು‌.

ಉಳಿದ ಯಾವುದೇ ಮಾರ್ಗಗಳಿಗೂ ಬಸ್ ಸಂಚಾರವಿಲ್ಲ. ಬಸ್ ನಿಲ್ದಾಣ ಬಿಕೋ ಎನ್ನುತಿದೆ.

ಡಿಪೊದಿಂದ ನಿಲ್ದಾಣಕ್ಕೆ ಬಂದ ಬಸ್ ನಿರ್ವಾಹಕರು ಟಿಸಿಯಿಂದ ಎಂಟ್ರಿ ಹಾಕಿಸಿಕೊಂಡರು. ಪೊಲೀಸ್ ವಾಹನ ಮುಂದೆ ಹೊರಟಿತು‌.

ADVERTISEMENT

ಅತ್ತ ಸಾರಿಗೆ ನಿಗಮಗಳ ನೌಕರರ ಮುಷ್ಕರ ಭಾನುವಾರವೂ ರಾಜ್ಯದಾದ್ಯಂತ ಮುಂದುವರಿದಿದೆ. ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ಬಹುತೇಕ ಬಸ್ ಗಳು ರಸ್ತೆಗೆ ಇಳಿದಿಲ್ಲ.

ತಮ್ಮನ್ನೂ ಸರ್ಕಾರಿ ನೌಕರೆರೆಂದು ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಗುರುವಾರದಿಂದ ಮುಷ್ಕರ ನಡೆಸುತ್ತಿದ್ದಾರೆ. ನೌಕರರ ಪ್ರತಿಭಟನೆ ಅಂತ್ಯಗೊಳಿಸಲು ರಾಜ್ಯ ಸರ್ಕಾರ ನಡೆಸಿದ ಪ್ರಯತ್ನಗಳು ಫಲ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.