ADVERTISEMENT

ಶಿಶು ಮರಣ ತಪ್ಪಿಸಲು ಶ್ರಮಿಸಿ: ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವೀರಭದ್ರಯ್ಯ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2020, 14:30 IST
Last Updated 11 ಮಾರ್ಚ್ 2020, 14:30 IST
ಪ್ರಧಾನ ಮಂತ್ರಿ ಸುರಕ್ಷತಾ ಮಾತೃತ್ವ ಅಭಿಯಾನ ಯೋಜನೆಯಡಿ ನೋಂದಾಯಿಸಿಕೊಂಡು ತಾಯಿ ಮತ್ತು ಶಿಶು ಮರಣವನ್ನು ತಪ್ಪಿಸುವಲ್ಲಿ ಶ್ರಮವಹಿಸುತ್ತಿರುವ ಜಿಲ್ಲೆಯ ಖಾಸಗಿ ವೈದ್ಯರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು
ಪ್ರಧಾನ ಮಂತ್ರಿ ಸುರಕ್ಷತಾ ಮಾತೃತ್ವ ಅಭಿಯಾನ ಯೋಜನೆಯಡಿ ನೋಂದಾಯಿಸಿಕೊಂಡು ತಾಯಿ ಮತ್ತು ಶಿಶು ಮರಣವನ್ನು ತಪ್ಪಿಸುವಲ್ಲಿ ಶ್ರಮವಹಿಸುತ್ತಿರುವ ಜಿಲ್ಲೆಯ ಖಾಸಗಿ ವೈದ್ಯರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು   

ತುಮಕೂರು: ತಾಯಿ-ಮಗು ಮರಣವನ್ನು ಸಂಪೂರ್ಣವಾಗಿ ತಪ್ಪಿಸುವ ಮೂಲಕ ಜಿಲ್ಲೆಯನ್ನು ಅನೀಮಿಯಾ ಮುಕ್ತ ಜಿಲ್ಲೆ ಮಾಡಲು ಎಲ್ಲ ಆಶಾ ಕಾರ್ಯಕರ್ತೆಯರು ಶ್ರಮವಹಿಸಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವೀರಭದ್ರಯ್ಯ ಮನವಿ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರದ ಕನ್ನಡ ಭವನದಲ್ಲಿಂದು ಹಮ್ಮಿಕೊಂಡಿದ್ದ ‘ಪ್ರಧಾನ ಮಂತ್ರಿ ಸುರಕ್ಷತಾ ಮಾತೃತ್ವ ಅಭಿಯಾನ ಮತ್ತು ಅನೀಮಿಯಾ ಮುಕ್ತ ಭಾರತ್’ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನ ಮಂತ್ರಿ ಸುರಕ್ಷತಾ ಮಾತೃತ್ವ ಅಭಿಯಾನ ಯೋಜನೆಯಡಿ ಜಿಲ್ಲೆಯಲ್ಲಿ ಹೆಚ್ಚು ಸ್ತ್ರೀರೋಗ ತಜ್ಞರು ನೋಂದಾಯಿಸಿಕೊಂಡು ಸೇವೆ ಸಲ್ಲಿಸುತ್ತಿದ್ದಾರೆ. ಇದು ರಾಜ್ಯದಲ್ಲಿಯೇ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ತಿಳಿಸಿದರು.

ADVERTISEMENT

ಚರಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಸವರಾಜ್, ಕಾರ್ಯಕರ್ತರು, ವೈದ್ಯರು ಸೇರಿದಂತೆ ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳ ಶ್ರಮದಿಂದ ತಾಯಿಯ ಮರಣ ಕಳೆದ 20 ವರ್ಷಗಳಿಂದ ಕಡಿಮೆಯಾಗುತ್ತಿದೆ. ಅಲ್ಲದೆ, ತಾಯಿಗೆ ತಗಲುವ ಸೋಂಕಿನ ಪ್ರಮಾಣ ಕೂಡಾ ಕಡಿಮೆಯಾಗಿದೆ ಎಂದರು.

ಕಾನೂನುಗಳ ಬಿಗಿ ವ್ಯವಸ್ಥೆ, ಜನರಿಗೆ ಮೂಡಿರುವ ಜಾಗೃತಿಯಿಂದಾಗಿಯೂ ತಾಯಿಯ ಮರಣ ಕಡಿಮೆಯಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಆರ್.ಚಂದ್ರಿಕಾ, ರಾಜ್ಯದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯದ ಸಲಹೆಗಾರ ಡಾ.ನಿಖಿಲ್, ಆರ್.ಸಿ.ಹೆಚ್. ಅಧಿಕಾರಿ ಡಾ.ಕೇಶವ್‍ರಾಜ್, ಡಾ.ಹನುಮಕ್ಕ ಸೇರಿದಂತೆ ತಾಲ್ಲೂಕು ವೈದ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.