ADVERTISEMENT

ವಾಲಿಬಾಲ್‌ ಪಂದ್ಯ: ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2019, 9:48 IST
Last Updated 11 ನವೆಂಬರ್ 2019, 9:48 IST
ವಾಲಿಬಾಲ್ ಪಂದ್ಯದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ನಂಗಲಿ ಸ್ವಾಮಿ ವಿವೇಕಾನಂದ ಶಾಲೆಯ ವಿಧ್ಯಾರ್ಥಿಗಳನ್ನು ಆಡಳಿತ ಮಂಡಳಿ ಅಭಿನಂದಿಸಿದರು
ವಾಲಿಬಾಲ್ ಪಂದ್ಯದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ನಂಗಲಿ ಸ್ವಾಮಿ ವಿವೇಕಾನಂದ ಶಾಲೆಯ ವಿಧ್ಯಾರ್ಥಿಗಳನ್ನು ಆಡಳಿತ ಮಂಡಳಿ ಅಭಿನಂದಿಸಿದರು   

ನಂಗಲಿ : ಗ್ರಾಮದ ಸ್ವಾಮಿ ವಿವೇಕಾನಂದ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತುಮಕೂರು ಜಿಲ್ಲೆಯ ಕುಣಿಗಲ್‌ನಲ್ಲಿ ನಡೆದ 14 ವರ್ಷದೊಳಗಿನ ವಾಲಿಬಾಲ್ ಕ್ರೀಡಾಕೂಟಗಳಲ್ಲಿ ಮೈಸೂರು ವಿಭಾಗದ ವಿರುದ್ಧ ಗೆಲುವು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದರಿಂದ ಶಾಲೆಯ ಮತ್ತು ಗ್ರಾಮದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿದರು.

ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಎಲ್ಲಾ ವಿಧ್ಯಾರ್ಥಿಗಳನ್ನು ಶಾಲೆಯ ಆಡಳಿತ ಮಂಡಳಿ ಪ್ರತ್ಯೇಕವಾಗಿ ಶಾಲೆಗೆ ಆಹ್ವಾನಿಸಿ ಸಿಹಿಹಂಚಿ, ಹೂಮಾಲೆಗಳನ್ನು ಹಾಕಿ ಅಭಿನಂದಿಸಿದರು.

ADVERTISEMENT

ಶಾಲಾ ಕಾರ್ಯದರ್ಶಿ ಕೆ.ರಾಮಚಂದ್ರಪ್ಪ ಮಾತನಾಡಿ, ಇದೇ ಮೊದಲ ಬಾರಿಗೆ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವುದು ಖುಷಿಯ ಸಂಗತಿ. ರಾಷ್ಟ್ರ ಮಟ್ಟದಲ್ಲಿಯೂ ಗೆಲುವನ್ನು ಪಡೆಯಲು ಎಲ್ಲಾ ರೀತಿಯ ಸಹಕಾರ ಮತ್ತು ಪ್ರೋತ್ಸಾಹ ನೀಡಲಾಗುವುದು ಎಂದು ತಿಳಿಸಿದರು.

ಶಾಲಾ ಮುಖ್ಯಸ್ಥೆ ಕೃತಿಕಾ, ದೈಹಿಕ ಶಿಕ್ಷಕ ಶ್ರೀನಿವಾಸ್, ಮುಖ್ಯ ಶಿಕ್ಷಕರಾದ ಬಾಬು, ಭಾಸ್ಕರ್, ಶಿಕ್ಷಕರಾದ ದೇವರಾಜ್, ರಂಗಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.