ADVERTISEMENT

ತುಮಕೂರು: ಆಟೊ ಉರುಳಿ ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 6 ಜೂನ್ 2022, 12:45 IST
Last Updated 6 ಜೂನ್ 2022, 12:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ಪಾವಗಡ ತಾಲ್ಲೂಕಿನ ನಲಿಗಾನಹಳ್ಳಿ ಬಳಿ ಸೋಮವಾರ ಆಟೊ ಉರುಳಿಬಿದ್ದು ಇಬ್ಬರು ಮೃತಪಟ್ಟಿದ್ದಾರೆ.
ಬ್ಯಾಡನೂರು ದೊಡ್ಡಹಟ್ಟಿ ಗ್ರಾಮದ ಕೋಣನಕುರಿಕೆ ಬಂಡಪ್ಪ (60), ಈರಬಂಡಪ್ಪ (65) ಮೃತರು. ನಾಗಮ್ಮ ಎಂಬುವರು ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ.

ನಲಿಗಾನಹಳ್ಳಿ ಕಡೆಯಿಂದ ಪಟ್ಟಣಕ್ಕೆ ಬರುತ್ತಿದ್ದ ಆಟೊ ಗ್ರಾಮದ ಬಳಿಯ ಹಳ್ಳದ ಸಮೀಪ ಪಲ್ಟಿಯಾಗಿದೆ. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT