ತುಮಕೂರು: ಮಧುಗಿರಿ ಪಟ್ಟಣದ 10ನೇ ವಾರ್ಡ್‌ನ ಕೊಳವೆ ಬಾವಿ ನೀರು ಕುಡಿಯಲು ಯೋಗ್ಯವಲ್ಲ ಎಂಬ ವರದಿ ಬಂದಿದೆ. ಈ ಭಾಗದ ಜನರಿಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಕುಡಿಯುವ ನೀರಿನ ಕ್ಲೋರಿನೇಷನ್ ಮಾಡಬೇಕು. ನೀರಿನ ಗುಣಮಟ್ಟದ ಬಗ್ಗೆ ನಿಗಾ ವಹಿಸಬೇಕು. ಮಳೆಯಿಂದ ಹಾನಿಗೊಳಗಾದ ಪ್ರಕರಣಗಳನ್ನು ಶೀಘ್ರವಾಗಿ ಪರಿಶೀಲಿಸಿ, ಸೂಕ್ತ ಪರಿಹಾರ ವಿತರಿಸಬೇಕು ಎಂದು ನಿರ್ದೇಶಿಸಿದರು.
ಜಿ.ಪಂ ಸಿಇಒ ಜಿ.ಪ್ರಭು, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಡಿಎಚ್‌ಒ ಡಾ.ಬಿ.ಎಂ.ಚಂದ್ರಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ್, ಉಪವಿಭಾಗಾಧಿಕಾರಿ ಗೌರವ್‌ಕುಮಾರ್ ಶೆಟ್ಟಿ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.