
ಪ್ರಜಾವಾಣಿ ವಾರ್ತೆ
ತುಮಕೂರು: ಕೋರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ 48ರಲ್ಲಿ ಶುಕ್ರವಾರ ಬೆಳಗಿನ ಜಾವ ರಸ್ತೆ ಬದಿ ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿದ್ದು, ನಾಲ್ವರು ಅಯ್ಯಪ್ಪ ಸ್ವಾಮಿ ಭಕ್ತರು ಮೃತಪಟ್ಟಿದ್ದಾರೆ.
ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ (30), ಗವಿಸಿದ್ದಪ್ಪ (28)ಮೃತರು. ಎಲ್ಲರೂ ಕೊಪ್ಪಳ ಜಿಲ್ಲೆಯ ಕುಕನೂರು ನಿವಾಸಿಗಳು.
ಗಾಯಗೊಂಡ ಶ್ರೀನಿವಾಸ್, (32), ಪ್ರವೀಣ್ ಕುಮಾರ್ (28), ರಾಜಪ್ಪ (45), ಹುಲಿಗಪ್ಪ (32), ರಾಕೇಶ್ (24), ತಿರುಪತಿ (33), ಶ್ರೀನಿವಾಸ್, (32) ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಯ್ಯಪ್ಪಸ್ವಾಮಿ ದರ್ಶನ ಮುಗಿಸಿಕೊಂಡು ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಕ್ರೂಸರ್ ಗಾಡಿಯಲ್ಲಿ ಹತ್ತು ಜನ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.