ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಸಾರ್ಥವಳ್ಳಿ ಗ್ರಾಮದಲ್ಲಿರುವ ಕೆರೆಗೆ ಭಾನುವಾರ ಬಾಲಕಿ ಬಿದ್ದು ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯನ್ನು ಹೇಮಾಶ್ರೀ (11) ಎಂದು ಗುರುತಿಸಲಾಗಿದೆ.
ಮೂಲತಃ ಅರಸಿಕೆರೆ ತಾಲ್ಲೂಕಿನ ಸೊಪ್ಪಿನಹಳ್ಳಿ ಗ್ರಾಮದ ಬಾಲಕಿ ಹೇಮಶ್ರೀ ಬೇಸಿಗೆ ರಜಾ ದಿನಗಳನ್ನು ಕಳೆಯಲು ತನ್ನ ಅಜ್ಜಿಯ ಮನೆ ಸಾರ್ಥವಳ್ಳಿ ಗ್ರಾಮಕ್ಕೆ ಬಂದಿದ್ದಳು.
ಸ್ಥಳಕ್ಕೆ ವೃತ್ತ ನಿರೀಕ್ಷಕ ಚಂದ್ರಶೇಖರ್.ಟಿ.ಕೆ, ಸಬ್ ಇನ್‌ಸ್ಪೆಕ್ಟರ್ ರಾಜೇಶ್ ಭೇಟಿ ನೀಡಿದ್ದರು. ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.