
ಪ್ರಜಾವಾಣಿ ವಾರ್ತೆ
ತುಮಕೂರು: ತಾಲ್ಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ಬೆಳಿಗ್ಗೆ ಲಾರಿಗೆ ಕಾರು ಡಿಕ್ಕಿಯಾಗಿ, ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶದ ಅನಿಕೇತ್, ಅಭೀರ್, ಆಂಧ್ರಪ್ರದೇಶದ ಸನ್ಮುಕ್ತಿ ಮೃತರು. ಎಲ್ಲರು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಪ್ರವಾಸಕ್ಕೆ ತೆರಳಿದ್ದರು. ಬೆಂಗಳೂರಿಗೆ ವಾಪಸ್ ಹೋಗುವಾಗ ಅಪಘಾತ ಸಂಭವಿಸಿದೆ.
ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ. ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಕೋರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.