ADVERTISEMENT

2027ಕ್ಕೆ ತುಮಕೂರು–ಚಿತ್ರದುರ್ಗ ರೈಲ್ವೆ ಕಾಮಗಾರಿ ಪೂರ್ಣ ಎಂದ ವಿ.ಸೋಮಣ್ಣ

ಅಧಿಕಾರಿಗಳ ಸಭೆ ನಂತರ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮಾಹಿತಿ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 7:23 IST
Last Updated 27 ಫೆಬ್ರುವರಿ 2026, 7:23 IST
ಶಿರಾದ ತಾಲ್ಲೂಕು ಕಚೇರಿಯಲ್ಲಿ ಗುರುವಾರ ಕೇಂದ್ರ ಸಚಿವ ವಿ.ಸೋಮಣ್ಣ ಅಧಿಕಾರಿಗಳ ಸಭೆ ನಡೆಸಿದರು. ಶಾಸಕ ಟಿ.ಬಿ‌.ಜಯಚಂದ್ರ, ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಹಾಜರಿದ್ದರು
ಶಿರಾದ ತಾಲ್ಲೂಕು ಕಚೇರಿಯಲ್ಲಿ ಗುರುವಾರ ಕೇಂದ್ರ ಸಚಿವ ವಿ.ಸೋಮಣ್ಣ ಅಧಿಕಾರಿಗಳ ಸಭೆ ನಡೆಸಿದರು. ಶಾಸಕ ಟಿ.ಬಿ‌.ಜಯಚಂದ್ರ, ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಹಾಜರಿದ್ದರು   

ಶಿರಾ: ತುಮಕೂರು- ಚಿತ್ರದುರ್ಗ, ತುಮಕೂರು– ರಾಯದುರ್ಗ ಎರಡು ರೈಲ್ವೆ ಯೋಜನೆಗಳನ್ನು 2027ರ ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳಿಸುವುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ತಾಲ್ಲೂಕು ಕಚೇರಿಯಲ್ಲಿ ಗುರುವಾರ ತುಮಕೂರು- ಚಿತ್ರದುರ್ಗ ರೈಲ್ವೆ ಕಾಮಗಾರಿ ವೀಕ್ಷಿಸಿ, ಅಧಿಕಾರಿಗಳ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ತುಮಕೂರು- ಚಿತ್ರದುರ್ಗ ರೈಲ್ವೆ ಯೋಜನೆ ಈ ಭಾಗದ ಜನರ ಕನಸಾಗಿದೆ. ಹಲವು ವರ್ಷಗಳ ಹೋರಾಟದ ಫಲವಾಗಿ ಯೋಜನೆ ರೂಪುಗೊಳ್ಳುತ್ತಿದ್ದು ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ ಎಂದರು.

ADVERTISEMENT

ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ರೈಲ್ವೆ ಕಾಮಗಾರಿಯನ್ನು ವೀಕ್ಷಣೆ ಮಾಡಿದ್ದು ತ್ವರಿತವಾಗಿ ಕಾಮಗಾರಿ ನಡೆಯುತ್ತಿದೆ. ಇದುವರೆಗೂ ಭೂಸ್ವಾಧೀನ ಕಾಮಗಾರಿ ನಡೆಯದೆ ಕಾಮಗಾರಿ ವಿಳಂಬವಾಗಿತ್ತು. ಈಗ ಸಮಸ್ಯೆ ಬಗೆಹರಿಸಲಾಗಿದೆ. ಕೆರೆಗಳಲ್ಲಿ ಹೂಳೆತ್ತುವ ಮಣ್ಣನ್ನು ರೈಲ್ವೆ ಕಾಮಗಾರಿಗೆ ಬಳಕೆಗೆ ಶಾಸಕ ಟಿ.ಬಿ.ಜಯಚಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದು ಸುಮಾರು 25 ಕೆರೆಗಳನ್ನು ಮಣ್ಣು ಬಳಕೆ ಮಾಡಿಕೊಳ್ಳಲಾಗುವುದು ಎಂದರು.

ಎರಡು ರೈಲ್ವೆ ಯೋಜನೆಗಳಿಗೆ ಹಣಕಾಸಿನ ಕೊರತೆ ಇಲ್ಲ, ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ ಎಂದರು.

ರಾಷ್ಟ್ರೀಯ ಹೆದ್ದಾರಿ-234ರ ಶಿರಾ- ಬಡವನಹಳ್ಳಿ ನಡುವೆ 25.2 ಕಿ.ಮೀ ರಸ್ತೆಯ ₹634 ಕೋಟಿ ವೆಚ್ಚದ ಕಾಮಗಾರಿ ಶೀಘ್ರ ಪ್ರಾರಂಭವಾಗಲಿದೆ. ಭೂ ಸ್ವಾಧೀನ ಮಾಡಿಕೊಂಡು ರೈತರಿಗೆ ಪರಿಹಾರ ನೀಡಲಾಗುವುದು ಎಂದರು.

ಮಧುಗಿರಿ ಏಕಶಿಲಾ ಬೆಟ್ಟ, ದೇವರಾಯನದುರ್ಗಾ, ನಂದಿಬೆಟ್ಟಕ್ಕೆ ರೂಫ್ ವೇ ನಿರ್ಮಾಣಕ್ಕೆ ಕೇಂದ್ರ ಸಚಿವರೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಶಾಸಕ ಟಿ.ಬಿ‌.ಜಯಚಂದ್ರ, ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಹಾಗೂ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.