ADVERTISEMENT

ಥರ್ಮಲ್ ಸ್ಕ್ಯಾನಿಂಗ್ ಮಾಡುವಾಗ ಉದಾಸೀನತೆ: ಸಿಬ್ಬಂದಿ ಅಮಾನತು

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2020, 10:31 IST
Last Updated 21 ಮಾರ್ಚ್ 2020, 10:31 IST
   

ತುಮಕೂರು: ನಗರದ ರೈಲ್ವೆ ನಿಲ್ದಾಣದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಥರ್ಮಲ್ ಸ್ಕ್ಯಾನಿಂಗ್ ಮಾಡುವಾಗ ಉದಾಸೀನತೆ ತೋರಿದ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಸೇವೆಯಿಂದ ಅಮಾನತ್ತು ಮಾಡಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಿಕಾ ಆದೇಶಿಸಿದ್ದಾರೆ.

ತುಮಕೂರು ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಯ ಕಿರಿಯ ಆರೋಗ್ಯ ಸಹಾಯಕ ಎ.ನರಸಿಂಹಮೂರ್ತಿ ಅಮಾನತ್ತುಗೊಂಡ ಸಿಬ್ಬಂದಿ.

ಇವರು ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡುವಾಗ ಉದಾಸೀನತೆ ತೋರುತ್ತಿರುವ ದೃಶ್ಯಗಳು ಸಾಮಾಜಿಕ ಜಾಲಾ ತಾಣದಲ್ಲಿ ವೈರಲ್ ಆಗಿತ್ತು.

ADVERTISEMENT

ಕೊರೊನಾ ವೈರಸ್ ಸೋಂಕಿನಿಂದ ಜನರನ್ನು ಪಾರು ಮಾಡಲು ಸಾವಿರಾರು ಮಂದಿ ಅಧಿಕಾರಿಗಳು, ವೈದ್ಯರು ಹಾಗೂ ಸಿಬ್ಬಂದಿ ಊಟ, ನಿದ್ರೆ ಬಿಟ್ಟು ಹಗಲು ರಾತ್ರಿ ದುಡಿಯುತ್ತಿದ್ದಾರೆ. ಆದರೆ ತಮಗೆ ಒಪ್ಪಿಸಿದ ಒಂದು ಸಣ್ಣ ಜವಾಬ್ದಾರಿಯನ್ನು ಈ ಅಧಿಕಾರಿ ಎಷ್ಟು ಬೇಜವಬ್ದಾರಿಯಿಂದ ನಿರ್ವಹಿಸುತ್ತಿದ್ದಾರೆ. ಸಾವಿರಾರು ಜನರ‌ ಶ್ರಮ ಹಾಳು ಮಾಡಲು ಇಂತಹ ಒಬ್ಬರು ಸಾಕಲ್ಲವೇ? ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.