
ತುಮಕೂರು: ‘ತುಮಕೂರು –ದಾವಣಗೆರೆ ರೈಲ್ವೆ ಕಾಮಗಾರಿ 2 ಹಂತದಲ್ಲಿ ನಡೆಯುತ್ತಿದೆ. ಈಗ ಸುಮಾರು ನಾಲ್ಕು ಸಾವಿರ ಎಕರೆ ಜಾಗ ತೆಗೆದುಕೊಂಡು ಕಾಮಗಾರಿ ಪೂರ್ಣಗೊಳಿಸಿದ್ದೇವೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ನಗರದ ಶೆಟ್ಟಿಹಳ್ಳಿ ಬಳಿ ರೈಲ್ವೆ ಕೆಳ ಸೇತುವೆಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ಮಲ್ಲಸಂದ್ರ ಕೆಳ ಸೇತುವೆ ಕಾಮಗಾರಿ ನವೆಂಬರ್‌ನಲ್ಲಿ ಮುಗಿಯಲಿದೆ ಎಂದು ತಿಳಿಸಿದರು.
ಹೆಗ್ಗೆರೆ ಬಳಿಯ ಮೇಲ್ಸೇತುವೆ, ಭೀಮಸಂದ್ರ ಬಳಿ ಪಾದಚಾರಿ ಕೆಳ ಸೇತುವೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಟವಾಡಿ, ಬಡ್ಡಿಹಳ್ಳಿ, ಮೈದಾಳ, ಪಂಡಿತನಹಳ್ಳಿ ಬಳಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.