ADVERTISEMENT

ಶಿರಾ: ಗ್ರಾಚ್ಯುಟಿ ಪಾವತಿಗೆ ಬೇಡಿಕೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2025, 5:41 IST
Last Updated 10 ಜುಲೈ 2025, 5:41 IST
ಶಿರಾದ ತಾಲ್ಲೂಕು ಕಚೇರಿ ಬಳಿ ಬುಧವಾರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗ್ರೇಡ್- 2 ತಹಶೀಲ್ದಾರ್ ನಾಗರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರು
ಶಿರಾದ ತಾಲ್ಲೂಕು ಕಚೇರಿ ಬಳಿ ಬುಧವಾರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗ್ರೇಡ್- 2 ತಹಶೀಲ್ದಾರ್ ನಾಗರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಶಿರಾ: ನಗರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಎಐಟಿಯುಸಿ ಮತ್ತು ಸಿಐಟಿಯುಯಿಂದ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಹಾಗೂ ಸಿಡಿಪಿಒ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.

ಸುಪ್ರೀಂಕೋರ್ಟಿನ ತೀರ್ಪಿನಂತೆ ಅಂಗನವಾಡಿ ಉದ್ಯೋಗಿಗಳ ಗೌರವ ಸೇವೆಯನ್ನು ನಾಗರಿಕ ಸೇವೆಯಾಗಿ ಪರಿಗಣಿಸಿ, ಕಾರ್ಯಕರ್ತೆಯರು ‘ಸಿ’ ದರ್ಜೆ ಹಾಗೂ ಸಹಾಯಕಿಯರನ್ನು ‘ಡಿ’ ದರ್ಜೆ ನೌಕರರನ್ನಾಗಿ ಖಾಯಂಗೊಳಿಸಬೇಕು. ನಿವೃತ್ತರಾಗಿರುವ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಪಾವತಿಸಬೇಕು ಎಂದು ಒತ್ತಾಯಿಸಿದರು.

ಅಂಗನವಾಡಿ ಉದ್ಯೋಗಿಗಳಿಗೆ ಗೌರವಧನ ನೀಡುವ ಪದ್ಧತಿ ಬಿಟ್ಟು ಘನತೆಯುಕ್ತ ಜೀವನ ನಡೆಸಲು ₹26 ಸಾವಿರ ಕನಿಷ್ಠ ವೇತನ, ನಿವೃತ್ತರಿಗೆ ಮಾಸಿಕ ₹10 ಸಾವಿರ ಮಾಸಿಕ ಪಿಂಚಣಿ ನೀಡುವ ಯೋಜನೆಯನ್ನು ರೂಪಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ADVERTISEMENT

ಪ್ರವಾಸಿ ಮಂದಿರದ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ ಎಐಟಿಯುಸಿ ಬಣದವರು ತಾಲ್ಲೂಕು ಕಚೇರಿಗೆ ತೆರಳಿ ಗ್ರೇಡ್- 2 ತಹಶೀಲ್ದಾರ್ ನಾಗರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರೆ, ಸಿಐಟಿಯು ಬಣದವರು ಸಿಡಿಪಿಒ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.