
ತುಮಕೂರು: ಜಿಲ್ಲೆಯಲ್ಲಿ 57 ಹಳ್ಳಿಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಘೋಷಣೆ ಮಾಡಲು ಸಿದ್ಧತೆ ನಡೆದಿದ್ದು, ಈಗಾಗಲೇ 18 ಹಳ್ಳಿಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಘೋಷಿಸಲಾಗಿದೆ.
ಕೊರಟಗೆರೆ ತಾಲ್ಲೂಕಿನ ಅನುಪಲು, ಬಿ.ಎಂ.ಪಾಳ್ಯ, ಪಕ್ಕಿರಪ್ಪನ ಪಾಳ್ಯ, ಗೊಂದಿಹಳ್ಳಿ ಪ್ಲಾಂಟೇಷನ್, ಭದ್ರಯ್ಯನಪಾಳ್ಯ, ಹನುಮಂತಗಿರಿ; ತಿಪಟೂರು ತಾಲ್ಲೂಕಿನ ತಿಮ್ಲಾಪುರ, ಹುಣಸೇಘಟ್ಟ, ಮಾನವನಘಟ್ಟ, ಬೀರಸಂದ್ರ, ರಾಮಚಂದ್ರಪುರ, ಗಂಗನಘಟ್ಟ; ಚಿಕ್ಕನಾಯಕನಹಳ್ಳಿ ತಾಲ್ಲೂಕು ಬಿಳಿಕಲ್ಲು ಗೊಲ್ಲರಹಟ್ಟಿ, ವಡ್ಡೇರಹಳ್ಳಿ, ಬಂಗಾರಗೆರೆ ಪಾಳ್ಯ, ದುರ್ಗದ ಸೀಮೆ ಪಾಳ್ಯ, ಎಂ.ಜಿ.ಪಾಳ್ಯ, ಅಡಾಣೆಕಲ್ಲು ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಗುರುತಿಸಲಾಗಿದೆ.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ 3ನೇ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಈ ವಿಷಯ ತಿಳಿಸಿದರು.
2025-26ನೇ ಸಾಲಿನಲ್ಲಿ 57 ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಘೋಷಿಸಲು ಸಿದ್ಧತೆ ನಡೆದಿದೆ. ಈ ಗ್ರಾಮಗಳಲ್ಲಿ ತಂಬಾಕು ದುಷ್ಪರಿಣಾಮ, ಕೋಟ್ಪಾ ಕಾಯ್ದೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಶಾರದಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ದಿನೇಶ್ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.