ADVERTISEMENT

ಶಿರಾ ಬಳಿ ಕೆಎಸ್ಆರ್‌ಟಿಸಿ ಬಸ್ ಪಲ್ಟಿ: 25 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2023, 6:08 IST
Last Updated 10 ಮಾರ್ಚ್ 2023, 6:08 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಶಿರಾ: ತಾಲ್ಲೂಕಿನ ಅರೇಹಳ್ಳಿ ಗ್ರಾಮದ ಸಮೀಪ ಶುಕ್ರವಾರ ಕೆಎಸ್ಆರ್ ಟಿಸಿ ಬಸ್ ಪಲ್ಟಿಯಾಗಿ ಸುಮಾರು 25 ಮಂದಿ ಗಾಯಗೊಂಡಿದ್ದಾರೆ.

ತಾಲ್ಲೂಕಿನ ತಾಳಗುಂದ ಗ್ರಾಮದಿಂದ ಶಿರಾಗೆ ಬರುತ್ತಿದ್ದ ಬಸ್ ಅರೇಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಸುಮಾರು 25 ಮಂದಿ ಗಾಯಗೊಂಡಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಚಿಕ್ಕಗೂಳ ಗ್ರಾಮದ ನಾಗಮ್ಮ, ಸಿದ್ದಗಂಗಪ್ಪ ಹಾಗೂ ಬಡವನಹಳ್ಳಿ ಗ್ರಾಮದ ಹೊನ್ನಪ್ಪ ಅವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಉಳಿದವರಿಗೆ ಶಿರಾದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.