ತುಮಕೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ನೌಕರರು ಮುಷ್ಕರ ಆರಂಭಿಸಿದ್ದು, ಜಿಲ್ಲೆಯಲ್ಲಿ ಬಸ್‌ಗಳ ಸಂಚಾರ ವಿರಳವಾಗಿದೆ.
ಬೆಂಗಳೂರು- ತುಮಕೂರು ಮಧ್ಯೆ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತಿವೆ. ಗ್ರಾಮೀಣ ಭಾಗದ ಕಡೆಗೆ ಹೋಗುವ ಬಸ್‌ಗಳ ಸಂಖ್ಯೆ ತೀರಾ ಕಡಿಮೆಯಾಗಿದೆ. ಹಳ್ಳಿಗಳಿಗೆ ಹೋಗುವ ಪ್ರಯಾಣಿಕರು ನಗರದ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದಾರೆ.
ದೂರದ ಊರುಗಳಿಂದ ಬರುವ ಬಸ್‌ಗಳು ಮಾತ್ರ ಬಸ್ ನಿಲ್ದಾಣಕ್ಕೆ ಆಗಮಿಸುತ್ತಿವೆ. ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯೂ ವಿರಳವಾಗಿದೆ. ಜಿಲ್ಲೆಯಲ್ಲಿ ಪ್ರತಿ ದಿನ 675 ಬಸ್‌ಗಳು ಸಂಚರಿಸುತ್ತವೆ. 2,400ಕ್ಕೂ ಹೆಚ್ಚು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
'ಬಸ್ ಸಂಚಾರ ಆರಂಭಿಸಿಲ್ಲ, ಎಲ್ಲ ಬಸ್‌ಗಳನ್ನು ಡಿಪೊದಲ್ಲಿ ನಿಲ್ಲಿಸಲಾಗಿದೆ. ಬೇರೆ ಬೇರೆ ಕಡೆಯಿಂದ ಬರುವ ಬಸ್‌ಗಳು ಮಾತ್ರ ನಿಲ್ದಾಣಕ್ಕೆ ಆಗಮಿಸುತ್ತಿವೆ' ಎಂದು ಕೆಎಸ್ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಆರ್.ದೇವರಾಜು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.