ADVERTISEMENT

ತುಮಕೂರು | ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಆಮಿಷ: ಉಪನ್ಯಾಸಕನಿಗೆ ₹32 ಲಕ್ಷ ವಂಚನೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2025, 3:20 IST
Last Updated 30 ಆಗಸ್ಟ್ 2025, 3:20 IST
ಸೈಬರ್‌ ಕ್ರೈಂ
ಸೈಬರ್‌ ಕ್ರೈಂ   

ತುಮಕೂರು: ‘ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಲಾಭ ಗಳಿಸಬಹುದು’ ಎಂಬ ಆಮಿಷಕ್ಕೆ ಒಳಗಾಗಿ ನಗರದ ಸರಸ್ವತಿಪುರಂನ ಉಪನ್ಯಾಸಕ ಭಾಸ್ಕರ್‌ ₹32.66 ಲಕ್ಷ ಕಳೆದುಕೊಂಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಟ್ರೇಡಿಂಗ್‌ ಕುರಿತು ಜಾಹೀರಾತು ಕ್ಲಿಕ್‌ ಮಾಡಿದ್ದಾರೆ. ನಂತರ ರಿತಿಕಾ ಸಿಂಗ್‌ ಎಂಬುವರು ವಾಟ್ಸ್‌ಆ್ಯಪ್‌ನಲ್ಲಿ ಮೆಸೇಜ್‌ ಕಳುಹಿಸಿದ್ದಾರೆ. ಹಣ ಹೂಡಿಕೆ ಬಗ್ಗೆ ಮಾಹಿತಿ ನೀಡಿದ್ದಾರೆ. ಭಾಸ್ಕರ್‌ https://www.axoskspro.com/ ವೆಬ್‌ಸೈಟ್‌ ಲಿಂಕ್‌ನಲ್ಲಿ ಅಗತ್ಯ ವಿವರ ಸಲ್ಲಿಸಿ ಖಾತೆ ತೆರೆದಿದ್ದಾರೆ. ಎಕ್ಸಿಸ್‌ ಬ್ಯಾಂಕ್‌ ಎಂದು ನಂಬಿ ಹಣ ವರ್ಗಾವಣೆಗೆ ಒಪ್ಪಿದ್ದಾರೆ.

ಭಾಸ್ಕರ್‌ ತನ್ನ ಮತ್ತು ಪತ್ನಿಯ ಖಾತೆಯಿಂದ ಸೈಬರ್‌ ಆರೋಪಿಗಳು ತಿಳಿಸಿದ ವಿವಿಧ ಬ್ಯಾಂಕ್‌ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು ₹32.66 ಲಕ್ಷ ವರ್ಗಾಯಿಸಿದ್ದಾರೆ. ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿ ಮೋಸ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೈಬರ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.