
ಸಾವು
(ಪ್ರಾತಿನಿಧಿಕ ಚಿತ್ರ)
ತುಮಕೂರು: ತನ್ನ ಇಬ್ಬರು ಮಕ್ಕಳನ್ನು ನೀರಿನ ಸಂಪ್‌ನಲ್ಲಿ ಮುಳುಗಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹಿರೇಹಳ್ಳಿ ಸಮೀಪದ ಸಿಂಗೋನಹಳ್ಳಿ ಕಾಲೊನಿಯಲ್ಲಿ ಮಂಗಳವಾರ ನಡೆದಿದೆ.
ಸಂಪತ್ ಕುಮಾರ್ ಪತ್ನಿ ವಿಜಯಲಕ್ಷ್ಮಿ (26) ತನ್ನ ಐದು ವರ್ಷದ ಅವಳಿ ಮಕ್ಕಳಾದ ಚೇತನ ಹಾಗೂ ಚೈತನ್ಯ ಎಂಬುವರನ್ನು ನೀರಿನ ಸಂಪ್‌ನಲ್ಲಿ ಮುಳುಗಿಸಿ, ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಸಂಪ್‌ನಿಂದ ಮೂರು ಮೃತದೇಹಗಳನ್ನು ಹೊರ ತೆಗೆದರು.
ವಿಜಯಲಕ್ಷ್ಮಿ ಗಂಡ ಸಂಪತ್ ಕುಮಾರ್ ನೆಲಮಂಗಲ ಬಳಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಕೆಲ ವರ್ಷಗಳಿಂದ ಸಿಂಗೋನಹಳ್ಳಿಯಲ್ಲಿ ನೆಲೆಸಿದ್ದರು. ಮೂಲತಹ ನೆಲಮಂಗಲ ತಾಲ್ಲೂಕು ದಾಬಸ್‌ಪೇಟೆ ಹೋಬಳಿ ಶಿವಗಂಗೆಯ ಕೊಟ್ಟಿಗೆರೆ ಗ್ರಾಮದವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.