
ಪ್ರಜಾವಾಣಿ ವಾರ್ತೆ
ತುಮಕೂರು: ಜಿಲ್ಲಾ ಆಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ ಪ್ರಯುಕ್ತ ನಗರದಲ್ಲಿ ಗುರುವಾರ ಮಿನಿ ಮ್ಯಾರಥಾನ್ ಓಟ ಏರ್ಪಡಿಸಲಾಗಿತ್ತು.
ವಿವಿಧ ಶಾಲಾ- ಕಾಲೇಜಿನ ವಿದ್ಯಾರ್ಥಿಗಳು, ಕ್ರೀಡಾಪಟುಗಳು ಓಟದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಕ್ರೀಡಾಂಗಣದ ಬಳಿ ಓಟಕ್ಕೆ ಚಾಲನೆ ನೀಡಲಾಯಿತು. ಎಸ್.ಎಸ್.ವೃತ್ತ, ಬಿ.ಎಚ್.ರಸ್ತೆ, ಎಸ್ಐಟಿ ಮುಖ್ಯರಸ್ತೆ, ಗಂಗೋತ್ರಿ ರಸ್ತೆ, ಎಸ್.ಎಸ್.ಪುರಂ, ರಾಧಾಕೃಷ್ಣ ರಸ್ತೆ, ಭದ್ರಮ್ಮ ಛತ್ರ ವೃತ್ತ, ಕೆ.ಆರ್.ಬಡಾವಣೆ, ಕೋತಿತೋಪು ಮುಖ್ಯರಸ್ತೆ ಮುಖಾಂತರ ಕ್ರೀಡಾಂಗಣ ತಲುಪಿತು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕ ರೋಹಿತ್ ಗಂಗಾಧರ್, ತರಬೇತುದಾರರಾದ ಶಿವಪ್ರಕಾಶ್, ಇಸ್ಮಾಯಿಲ್ ಇತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.