ADVERTISEMENT

ತುಮಕೂರು: ಧರ್ಮಸ್ಥಳಕ್ಕೆ ಹೊರಟಿದ್ದ ಮೂವರು ಮಸಣಕ್ಕೆ; ಇಬ್ಬರ ಸ್ಥಿತಿ ಗಂಭೀರ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2025, 14:32 IST
Last Updated 4 ಅಕ್ಟೋಬರ್ 2025, 14:32 IST
<div class="paragraphs"><p>ಅಪಘಾತದಿಂದಾಗಿ ಬಸ್‌ಗೆ ಹಾನಿಯಾಗಿರುವುದು</p></div>

ಅಪಘಾತದಿಂದಾಗಿ ಬಸ್‌ಗೆ ಹಾನಿಯಾಗಿರುವುದು

   

ತುಮಕೂರು: ತಾಲ್ಲೂಕಿನ ಬೆಳಧರ ಬಳಿ ಶನಿವಾರ ಸಂಜೆ ಖಾಸಗಿ ಬಸ್‌ ಮತ್ತು ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.

ಕೊರಟಗೆರೆ ತಾಲ್ಲೂಕಿನ ಕತ್ತಿನಾಗೇನಹಳ್ಳಿಯ ಶಿವಕುಮಾರ್‌ (28), ಗೋವಿಂದಪ್ಪ (60), ಬೈಚಾಪುರದ ಶಿವಶಂಕರ್‌ (28) ಮೃತರು. ಕತ್ತಿನಾಗೇನಹಳ್ಳಿಯ ಗೋಪಾಲ್‌ (28), ರೆಡ್ಡಿಹಳ್ಳಿಯ ಶಂಕರ್‌ (28) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಧರ್ಮಸ್ಥಳಕ್ಕೆ ಹೊರಟಿದ್ದರು. ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ.

ADVERTISEMENT

ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ‘ಓವರ್‌ ಟೇಕ್‌ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.