ಪಾವಗಡ: ತಾಲ್ಲೂಕಿನ ಮಂಗಳವಾಡ ಗ್ರಾಮದ ಬಳಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಎಮ್ಮೆ ಮೇಲೆ ಭಾನುವಾರ ರಾತ್ರಿ ಚಿರತೆಯೊಂದು ದಾಳಿ ಮಾಡಿ ಕೊಂದಿದೆ.
ಇದೇ ಗ್ರಾಮದ ತಿಮ್ಮಣ್ಣ ಎಂಬುವರ ಜಮೀನಿನಲ್ಲಿ ನಿರ್ಮಿಸಿದ್ದ ಕೊಟ್ಟಿಗೆಯಲ್ಲಿ ಎಮ್ಮೆಯನ್ನು ಕಟ್ಟಿ ಹಾಕಲಾಗಿತ್ತು.
ಮೂರು ತಿಂಗಳ ಹಿಂದೆ ಹಸುವಿನ ಕರುವೂಂದನ್ನು ಹುಣಸೆ ಮರದ ಮೇಲಕ್ಕೆ ಎಳೆದೊಯ್ದು ಚಿರತೆ ತಿಂದಿತ್ತು. ಎಮ್ಮೆ ಮೇಲೆ ಚಿರತೆ ದಾಳಿ ನಡೆಸಿರುವುದು ಈ ಭಾಗದ ರೈತರಲ್ಲಿ ಆತಂಕ ಹೆಚ್ಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.