ADVERTISEMENT

ತುಮಕೂರು: 124 ಪೊಲೀಸರಿಗೆ ಮುಂಬಡ್ತಿ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2020, 15:46 IST
Last Updated 10 ಫೆಬ್ರುವರಿ 2020, 15:46 IST
ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 68 ಸಿಬ್ಬಂದಿಗೆ ಸಿಪಿಸಿ ಹುದ್ದೆಯಿಂದ ಸಿಎಚ್‍ಸಿ ಹುದ್ದೆಗೆ, 43 ಮಂದಿಗೆ ಸಿಎಚ್‍ಸಿ ಹುದ್ದೆಯಿಂದ ಎಎಸ್‍ಐ ಹುದ್ದೆಗೆ, 9 ಮಂದಿಗೆ ಎಪಿಸಿ ಹುದ್ದೆಯಿಂದ ಎಎಚ್‍ಸಿ ಹುದ್ದೆಗೆ ಹಾಗೂ 4 ಮಂದಿಗೆ ಎಎಚ್‍ಸಿ ಹುದ್ದೆಯಿಂದ ಎಆರ್‌ಎಸ್‍ಐ ಹುದ್ದೆಗೆ ಮುಂಬಡ್ತಿ ನೀಡಲಾಯಿತು.

ತುಮಕೂರು: ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 68 ಸಿಬ್ಬಂದಿಗೆ ಕಾನ್‌ಸ್ಟೆಬಲ್ ಹುದ್ದೆಯಿಂದ ಹೆಡ್‌ಕಾನ್‌ಸ್ಟೆಬಲ್ ಹುದ್ದೆಗೆ, 43 ಮಂದಿಗೆ ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗೆ, 9 ಮಂದಿಗೆ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಯಿಂದ ಸಶಸ್ತ್ರ ಹೆಡ್‌ಕಾನ್‌ಸ್ಟೆಬಲ್ ಹುದ್ದೆಗೆ ಹಾಗೂ 4 ಮಂದಿಗೆ ಸಶಸ್ತ್ರ ಹೆಡ್‌ಕಾನ್‌ಸ್ಟೆಬಲ್‌ ಹುದ್ದೆಯಿಂದ ಸಶಸ್ತ್ರ ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗೆ ಮುಂಬಡ್ತಿ ನೀಡಲಾಯಿತು.

ಮುಂಬಡ್ತಿ ಹೊಂದಿದ ಸಿಬ್ಬಂದಿಗೆ ಅಭಿನಂದನಾ ಕಾರ್ಯಕ್ರಮ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಮಾತನಾಡಿ, ‘ಮುಂಬಡ್ತಿ ಹೊಂದಿದ ಅಧಿಕಾರಿ, ಸಿಬ್ಬಂದಿ ಠಾಣೆಗಳಿಗೆ ಬರುವ ಸಾರ್ವಜನಿಕರೊಂದಿಗೆ ಉತ್ತಮ ನಡವಳಿಕೆಯಿಂದ ವರ್ತಿಸಬೇಕು. ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆ ಸಮಯದಲ್ಲಿ ಹಾಗೂ ಠಾಣೆಗಳಲ್ಲಿ ಒಗ್ಗಟ್ಟಿನಿಂದ ಕರ್ತವ್ಯ ನಿರ್ವಹಿಸಬೇಕು. ಅಪರಾಧ ಪ್ರಕರಣಗಳನ್ನು ತುರ್ತಾಗಿ ಪತ್ತೆಹಚ್ಚಿ ಇಲಾಖೆಗೆ ಕೀರ್ತಿ ತರಬೇಕು’ ಎಂದರು.

ADVERTISEMENT

ತುಮಕೂರು ನಗರ ಡಿವೈಎಸ್‌ಪಿ ತಿಪ್ಪೇಸ್ವಾಮಿ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್‌ಪಿ ಮಂಜುನಾಥ್ ಹಾಗೂ ನಗರದ ಪೊಲೀಸ್ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.