ಶಿರಾ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದೆ ಎನ್ನಲಾದ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣದಲ್ಲಿ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಪರಸ್ಪರ ಕೆಸರು ಎರಚಾಟದಲ್ಲಿ ತೊಡಗಿವೆ. ಅಂತಿಮವಾಗಿ ಇಡೀ ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ಆಮ್ ಆದ್ಮಿ ಪಾರ್ಟಿ ತಾಲ್ಲೂಕು ಘಟಕದ ಅಧ್ಯಕ್ಷ ಗೋಮಾರದಹಳ್ಳಿ ಮಂಜುನಾಥ್ ಆರೋಪಿಸಿದರು.
ಮೊದಲಿಗೆ ಪೆನ್ ಡ್ರೈವ್ ನಲ್ಲಿರುವ ವಿಡಿಯೊ ವೈಜ್ಞಾನಿಕ ಪರೀಕ್ಷೆ ನಡೆಸಿ ಅದರ ಸತ್ಯಾಸತ್ಯತೆ ಖಚಿತಪಡಿಸಬೇಕು. ಸತ್ಯ ಎಂದಾದರೆ ಅದಕ್ಕೆ ಕಾರಣವಾದ ಪ್ರಜ್ವಲ್ ರೇವಣ್ಣ ಮೇಲೆ ದಿಟ್ಟ ಕ್ರಮಕೈಗೊಳ್ಳಬೇಕು. ನಂತರ ವಿಡಿಯೊ ಬಹಿರಂಗ ಪಡಿಸಿದವರ ಮೇಲೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಇಲ್ಲಿ ಸಂತ್ರಸ್ತೆಯರ ವಿಚಾರಣೆ ನಡೆಸಲು ಯಾವುದೇ ಸಂತ್ರಸ್ತೆಯರು ದೂರು ಕೊಡಲು ಮುಂದೆ ಬರುತ್ತಿಲ್ಲವೆಂದು ಸಾಬೂಬು ಹೇಳುವ ಅಗತ್ಯವಿಲ್ಲ. ಈಗಾಗಲೇ ಸಂತ್ರಸ್ತೆಯರು ಮತ್ತು ಅವರ ಕುಟುಂಬದವರು ನೊಂದಿದ್ದು ಅವರನ್ನು ಮತ್ತಷ್ಟು ಘಾಸಿಗೊಳಿಸಬಾರದು. ವಿಡಿಯೊ ಸತ್ಯವೇ ಅಥವಾ ಕೃತಕವಾಗಿ ಸೃಷ್ಟಿಸಲಾಗಿದೆಯೇ ಎಂಬುದಷ್ಟೇ ಇಲ್ಲಿ ಮುಖ್ಯ. ಸತ್ಯ ಎಂದಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಸುಳ್ಳು ಎಂದಾದರೆ ಪ್ರಕರಣಕ್ಕೆ ಅಂತ್ಯ ಹಾಡುವಂತೆ ಹೇಳಿಕೆಯಲ್ಲಿ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.