ADVERTISEMENT

ಶಿರಾ | ಪಶು ಚಿಕಿತ್ಸಾ ಕೇಂದ್ರ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 11 ಮೇ 2025, 14:02 IST
Last Updated 11 ಮೇ 2025, 14:02 IST
ಶಿರಾ ತಾಲ್ಲೂಕಿನ ದೊಡ್ಡಬಾಣಗೆರೆ ಗ್ರಾಮದಲ್ಲಿ ಶಾಸಕ ಟಿ.ಬಿ.ಜಯಚಂದ್ರ ಅವರು ನೂತನ ಪಶು ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು
ಶಿರಾ ತಾಲ್ಲೂಕಿನ ದೊಡ್ಡಬಾಣಗೆರೆ ಗ್ರಾಮದಲ್ಲಿ ಶಾಸಕ ಟಿ.ಬಿ.ಜಯಚಂದ್ರ ಅವರು ನೂತನ ಪಶು ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು   

ಶಿರಾ: ಹೈನುಗಾರಿಕೆಯಿಂದ ರೈತರು ಆರ್ಥಿಕವಾಗಿ ಸದೃಢರಾಗುತ್ತಿದ್ದು ಇಂತಹ ಸಮಯದಲ್ಲಿ ಜಾನುವಾರುಗಳ ರಕ್ಷಣೆ ಪ್ರತಿಯೊಬ್ಬ ರೈತರ ಕರ್ತವ್ಯ. ಅವರಿಗೆ ಅನುಕೂಲವಾಗುವಂತೆ ಹೆಚ್ಚು ಪಶು ಆಸ್ಪತ್ರೆ ಪ್ರಾರಂಭಿಸುವುದಾಗಿ ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

ತಾಲ್ಲೂಕಿನ ದೊಡ್ಡಬಾಣಗೆರೆ ಗ್ರಾಮದಲ್ಲಿ ನೂತನ ಪಶು ಚಿಕಿತ್ಸಾ ಕೇಂದ್ರವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಹೈನುಗಾರಿಕೆಯ ಕಡೆ ರೈತರು ಹೆಚ್ಚು ಒಲವು ತೋರುತ್ತಿದ್ದಾರೆ. ಪಶು ವೈದ್ಯರು ಜಾನುವಾರುಗಳಲ್ಲಿ ಕಂಡು ಬರುವ ರೋಗಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.

ಗ್ರಾ.ಪಂ ಅಧ್ಯಕ್ಷೆ ಮಲ್ಲಮ್ಮ ಕಾಂತರಾಜ್, ಉಪಾಧ್ಯಕ್ಷೆ ರೂಪ ನರಸಪ್ಪ, ಗುಜ್ಜಾರಪ್ಪ, ರಾಮಕೃಷ್ಣಪ್ಪ, ರಂಗನಾಥ್, ಪುಟ್ಟೀರಪ್ಪ, ಗುಂಡಪ್ಪ, ಅಜ್ಜೇಗೌಡ, ಗಂಗಾಧರ, ರಾಜಣ್ಣ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.