ADVERTISEMENT

ತಿಪಟೂರು | ಸ್ಪರ್ಧೆ ವಿಜೇತರಿಗೆ ಪ್ರತಿಭಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 14:39 IST
Last Updated 27 ಜೂನ್ 2025, 14:39 IST
ತಿಪಟೂರು ತಾಲ್ಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಮಾಡಲಾಯಿತು
ತಿಪಟೂರು ತಾಲ್ಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಮಾಡಲಾಯಿತು   

ತಿಪಟೂರು: ತಾಲ್ಲೂಕು ಆಡಳಿತಸೌಧದ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ನಗರಸಭೆ ಆಶ್ರಯದಲ್ಲಿ 516ನೇ ಕೆಂಪೇಗೌಡ ಜಯಂತಿ ಆಚರಣೆ ಮಾಡಲಾಯಿತು.

ಶಾಸಕ ಕೆ.ಷಡಕ್ಷರಿ ಮಾತನಾಡಿ, ಹಿರಿಯರ ತ್ಯಾಗ ಬಲಿದಾನದ ಮೂಲಕ ನಾಡು ಕಟ್ಟಲಾಗಿದೆ. ಅವರ ಕೊಡುಗೆ, ತತ್ವ ಸಿದ್ಧಾಂತಗಳನ್ನು ಮುಂದಿನ ಪೀಳಿಗೆ ಮುಂದುವರೆಸಿಕೊಂಡು ಹೋಗುವ ಸಲುವಾಗಿ ಜಯಂತಿ ಆಚರಣೆ ಮಾಡಲಾಗುತ್ತದೆ ಎಂದರು.

ಕೆಂಪೆಗೌಡ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲಾಗಿದೆ. ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಸರ್ಕಾರ ಚಿಂತನೆ ಮಾಡುತ್ತಿದೆ. ಇದಕ್ಕಾಗಿ ಶಿರಾ ಭಾಗದಲ್ಲಿ ಸೂಕ್ತ ಜಾಗ ಗುರುತಿಸಲಾಗಿದೆ ಎಂದರು.

ADVERTISEMENT

ನಗರಸಭಾ ಅಧ್ಯಕ್ಷೆ ಯಮುನಾಧರಣೇಶ್ ಮಾತನಾಡಿ, ಸಾಂಸ್ಕೃತಿಕ ನಗರವಾಗಿರುವ ಬೆಂಗಳೂರಿನಲ್ಲಿ ಕನ್ನಡ ಭಾಷೆಯನ್ನು ಉಳಿಸಬೇಕಾಗಿದ್ದು ಮರೆಯಾಗುತ್ತಿರುವ ಕನ್ನಡವನ್ನು ಮೆರೆಯುವಂತೆ ಮಾಡಬೇಕು ಎಂದರು.

ಉಪವಿಭಾಗಾಧಿಕಾರಿ ಸಪ್ತಶ್ರೀ, ಉಪನ್ಯಾಸಕ ರೇಣುಕಯ್ಯ ಮಾತನಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಪ್ರಬಂಧ ಸ್ಪರ್ಧೆ, ಆಶುಭಾಷಣ, ಚಿತ್ರಕಲೆ, ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ತಹಶೀಲ್ದಾರ್ ಪವನ್‌ಕುಮಾರ್, ಇಒ ಎಚ್.ಎಂ.ಸುದರ್ಶನ್, ಮೇಘಶ್ರೀಸುಜಿತ್ ಭೂಷಣ್, ಚಿದಾನಂದ್, ವೈದ್ಯ ವಿವೇಜನ್, ಬಸವರಾಜಪ್ಪ, ರಾಮೇಗೌಡ, ಸೋಮಶೇಖರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.