ತುಮಕೂರು: ತುರುವೇಕೆರೆ ತಾಲ್ಲೂಕಿನ ಚಿಕ್ಕಶೆಟ್ಟಿಕೆರೆ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಮೂವರು ಗುರುವಾರ ಮೃತಪಟ್ಟಿದ್ದಾರೆ.
ಪ್ರಸನ್ನ (28), ಸಂತೋಷ (29) ಹಾಗೂ ಕಾರು ಚಾಲಕ ಚಿನ್ನಯ್ಯ (30) ಮೃತರು. ಅರಸೀಕೆರೆ ತಾಲ್ಲೂಕು ಕಮಲಾಪುರದಿಂದ ಬೆಂಗಳೂರಿಗೆ ತೆರಳುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಪ್ರಸನ್ನ ಹಾಗೂ ಸಂತೋಷ ಬೆಂಗಳೂರಿನ ಸರ್ಜಾರಪುರ ರಸ್ತೆಯ ಕೈಗೊಂಡನಹಳ್ಳಿಯಲ್ಲಿ ನೆಲೆಸಿದ್ದರು.
ಪ್ರಸನ್ನ ಪತ್ನಿ ಮಂದಾರ ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಸನ್ನ ಹಾಗೂ ಮಂದಾರ ವಿವಾಹ ಇತ್ತೀಚೆಗಷ್ಟೇ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.