ADVERTISEMENT

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶುಕ್ರವಾರ ತುಮಕೂರು ಬಂದ್

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ: ಐವರ ಬಂಧನ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2021, 7:56 IST
Last Updated 21 ಅಕ್ಟೋಬರ್ 2021, 7:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ಶುಕ್ರವಾರ ತುಮಕೂರು ನಗರ ಬಂದ್‌ಗೆ ಕರೆ ನೀಡಿವೆ.

ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಇತರ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬಂದ್‌ಗೆ ಕರೆ ಕೊಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ಹಿಂದೂಗಳ ಮೇಲೆ ಪದೇಪದೇ ಹಲ್ಲೆ ನಡೆಯುತ್ತಿದೆ. ಗೋ ಸಂರಕ್ಷಣೆಗೆ ಮುಂದಾದವರ ಮೇಲೆ ಹಲ್ಲೆ ಮಾಡುವುದು, ಬೆದರಿಕೆ ಹಾಕುವುದು ಮುಂದುವರೆದಿದೆ. ನಗರದಲ್ಲಿ ಕಸಾಯಿ ಖಾನೆಗಳು ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್‌ಗೆ ಕರೆ ನೀಡಲಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಐವರ ಬಂಧನ

ಬಜರಂಗದಳ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ಹಾಗೂ ಕಾರ್ಯಕರ್ತ ಕಿರಣ್ ಮೇಲೆ ಹಲ್ಲೆ ಮಾಡಿದ ಐವರು ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಬಂಧಿತರ ಹೆಸರುಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಉಳಿದವರ ಬಂಧನಕ್ಕೆ ಕಾರ್ಯಾಚರಣೆ ಮುಂದುವರೆದಿದೆ. ಹಲ್ಲೆ ನಂತರ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಆರೋಪಿಗಳ ಬಂಧನಕ್ಕೆ ಎರಡು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.

ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೈಕ್‌ಗಳಲ್ಲಿ ಯುವಕರು ವ್ಹೀಲಿಂಗ್ ಮಾಡುವುದು ಕಂಡು ಬಂದಿದ್ದು, ಪ್ರತ್ಯೇಕ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪೂರವಾಡ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.