ಸಾವು
ಪ್ರಾತಿನಿಧಿಕ ಚಿತ್ರ
ತುಮಕೂರು: ನಗರದ ಅಶೋಕ ನಗರದ ಖಾಸಗಿ ವಸತಿಗೃಹದಲ್ಲಿ ಸೋಮವಾರ ಉದ್ಯಮಿ, ಯಾದವ ನಗರದ ಮಲ್ಲಿಕಾರ್ಜುನ (45) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಲ್ಲಿಕಾರ್ಜುನ ತಮ್ಮ ಚಿಕ್ಕಪ್ಪನ ಮಗ ಚಂದ್ರಶೇಖರ್, ಮಾವ ಕಾಂತರಾಜು ಜತೆ ಸೇರಿ ಗುಬ್ಬಿ ಬಳಿ ಕಾರ್ಖಾನೆ ನಡೆಸುತ್ತಿದ್ದರು. ವ್ಯವಹಾರ ಸರಿಯಾಗಿ ನಡೆಯದೆ ನಷ್ಟ ಅನುಭವಿಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
‘ಲಾಡ್ಜ್‌ನಲ್ಲಿ ಡೆತ್‌ನೋಟ್ ಸಿಕ್ಕಿದ್ದು, ಅದರಲ್ಲಿ ನನ್ನ ಸಾವಿಗೆ ಚಂದ್ರಶೇಖರ್, ಕಾಂತರಾಜು ಕಾರಣ ಎಂದು ಉಲ್ಲೇಖಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಹೊಸ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.