ADVERTISEMENT

ಕೊರೊನಾ ವೈರಸ್ ದೃಢಪಟ್ಟಿಲ್ಲ: ಜಿಲ್ಲಾ ಆರೋಗ್ಯಾಧಿಕಾರಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2020, 15:22 IST
Last Updated 5 ಫೆಬ್ರುವರಿ 2020, 15:22 IST
ಡಾ.ಬಿ.ಆರ್.ಚಂದ್ರಿಕಾ
ಡಾ.ಬಿ.ಆರ್.ಚಂದ್ರಿಕಾ   

ತುಮಕೂರು: ಜಿಲ್ಲೆಯಲ್ಲಿ ಇಲ್ಲಿಯವರೆಗೆ ಕೊರೊನಾ ವೈರಸ್ ಪ್ರಕರಣಗಳು ದೃಢಪಟ್ಟಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಆರ್.ಚಂದ್ರಿಕಾ ತಿಳಿಸಿದ್ದಾರೆ.

ನಗರದ ವಿದ್ಯಾರ್ಥಿಯೊಬ್ಬರು ಚೀನಾದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾರೆ. ಅವರು ಇತ್ತೀಚೆಗೆ ನಗರಕ್ಕೆ ವಾಪಸ್ ಬಂದಿದ್ದಾರೆ. ಆ ವಿದ್ಯಾರ್ಥಿಯ ಗಂಟಲು ದ್ರವ ಹಾಗೂ ರಕ್ತದ ಮಾದರಿ ಸಂಗ್ರಹಿಸಿ ಬೆಂಗಳೂರಿನ ರಾಷ್ಟ್ರೀಯ ವೈರಾಣು ಸಂಶೋಧನಾ ಸಂಸ್ಥೆಗೆ ಕಳುಹಿಸಲಾಗಿತ್ತು. ಈ ರಕ್ತದ ಮಾದರಿಯ ಫಲಿತಾಂಶದಲ್ಲಿ ವೈರಸ್ ಕಂಡು ಬಂದಿಲ್ಲ ಎಂದು ಸಂಸ್ಥೆ ದೃಢಪಡಿಸಿದೆ.

ವಿದ್ಯಾರ್ಥಿಯು ಜಿಲ್ಲಾ ಆಸ್ಪತ್ರೆ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿಲ್ಲ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಶಂಕಿತರೂ ಇಲ್ಲ. ಸಾರ್ವಜನಿಕರು ಅನವಶ್ಯಕವಾಗಿ ಭಯ ಪಡುವ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ.

ADVERTISEMENT

ಸೋಂಕಿನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ 5 ಕೊಠಡಿಗಳ ಹಾಸಿಗೆ ಸೌಲಭ್ಯ ಹಾಗೂ ಅಗತ್ಯ ಔಷಧಿಗಳನ್ನು ದಾಸ್ತಾನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.