ADVERTISEMENT

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಚಂದ್ರಶೇಖರ ಗೌಡ ನೇಮಕ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2022, 12:38 IST
Last Updated 24 ನವೆಂಬರ್ 2022, 12:38 IST
ಕಾಂಗ್ರೆಸ್ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನಾಗಿ ಚಂದ್ರಶೇಖರ ಗೌಡ
ಕಾಂಗ್ರೆಸ್ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನಾಗಿ ಚಂದ್ರಶೇಖರ ಗೌಡ    

ತುಮಕೂರು: ಕಾಂಗ್ರೆಸ್ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನಾಗಿ ಚಂದ್ರಶೇಖರ ಗೌಡ ಅವರನ್ನು ಗುರುವಾರ ನೇಮಕ ಮಾಡಲಾಗಿದೆ.

ಆರು ವರ್ಷಗಳ ಕಾಲ ಪರಿಶಿಷ್ಟ ಜಾತಿಯ ಆರ್.ರಾಮಕೃಷ್ಣ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದು, ಈಗ ಹಿಂದುಳಿದ ಕಾಡುಗೊಲ್ಲ ಸಮುದಾಯಕ್ಕೆ ಅವಕಾಶ ಕಲ್ಪಿಸಲಾಗಿದೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಅಧ್ಯಕ್ಷರನ್ನು ಬದಲಾವಣೆ ಮಾಡುವ ಮೂಲಕ ಪಕ್ಷ ಸಂಘಟನೆಗೆ ವರಿಷ್ಠರು ಒತ್ತು ನೀಡಿದ್ದಾರೆ.

ADVERTISEMENT

ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಘಟಕ (ಒಬಿಸಿ) ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯ ಸೆನೆಟ್ ಸದಸ್ಯ, ಕೆಎಂಎಫ್ ನಿರ್ದೇಶಕ, ಮಧುಗಿರಿ ತಾಲ್ಲೂಕು ಭೂ ಮಂಜೂರಾತಿ ಸಮಿತಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ ಅನುಭವಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.