ತುಮಕೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಉತ್ತಮ ಲಾಭ ಗಳಿಸಬಹುದು ಎಂದು ನಂಬಿಸಿ ಸಿದ್ಧಗಂಗಾ ಬಡಾವಣೆಯ ಉದ್ಯಮಿಯೊಬ್ಬರಿಗೆ ₹73.80 ಲಕ್ಷ ವಂಚಿಸಲಾಗಿದೆ.
‘ಆನಂದ ರಾಠಿ ಸಪೋರ್ಟ್’ ಎಂಬ ವಾಟ್ಸ್‌ಆ್ಯಪ್ ಗ್ರೂಪ್‌ಗೆ ಉದ್ಯಮಿ ಮೊಬೈಲ್ ಸಂಖ್ಯೆಯನ್ನು ಆರೋಪಿಗಳು ಸೇರಿಸಿದ್ದಾರೆ. ಗ್ರೂಪ್‌ನಲ್ಲಿ ಷೇರು ಮಾರುಕಟ್ಟೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸೈಬರ್ ಆರೋಪಿಗಳು ತಿಳಿಸಿದಂತೆ ‘ಟ್ರೇಡ್ ಮೊಬಿ’ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಹಣ ವರ್ಗಾವಣೆ ಮಾಡಿದ್ದಾರೆ. ಮೊದಲಿಗೆ ₹1.15 ಲಕ್ಷ ವರ್ಗಾಯಿಸಿದ್ದಾರೆ.
ಮತ್ತಷ್ಟು ಹಣ ಹೂಡಿದರೆ ಹೆಚ್ಚಿನ ಲಾಭ ಪಡೆಯಬಹುದು ಎಂದು ಹೇಳಿದ್ದಾರೆ. ಇದನ್ನು ನಂಬಿ ಹಂತಹಂತವಾಗಿ ಒಟ್ಟು ₹73,80,697 ಹಣ ವರ್ಗಾಯಿಸಿದ್ದಾರೆ. ಹಣ ವಿತ್ ಡ್ರಾ ಮಾಡಲು ಮುಂದಾದಾಗ, ‘ಮತ್ತಷ್ಟು ಹೂಡಿಕೆ ಮಾಡಿದರೆ ಮಾತ್ರ ಹಣ ವಾಪಸ್ ಬರುತ್ತದೆ’ ಎಂದಿದ್ದಾರೆ. ಮೋಸ ಹೋಗಿರುವುದು ಅರಿವಿಗೆ ಬಂದ ನಂತರ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.