ತುಮಕೂರು: ಕಬಡ್ಡಿ ಪಂದ್ಯದಲ್ಲಿ ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಜತೆಗೆ ಬಾಜಿ ಕಟ್ಟಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ₹500 ಕಳೆದುಕೊಂಡರು.
ನಗರದಲ್ಲಿ ಭಾನುವಾರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ ಫೈನಲ್ ಪಂದ್ಯಗಳು ನಡೆದವು. ಬಾಲಕರ ವಿಭಾಗದ ಅಂತಿಮ ಪಂದ್ಯದಲ್ಲಿ ದಕ್ಷಿಣ ಕನ್ನಡ ಮತ್ತು ವಿಜಯಪುರ ತಂಡಗಳು ಮುಖಾಮುಖಿಯಾದವು. ದಕ್ಷಿಣ ಕನ್ನಡ ತಂಡವು 36-26 ಅಂಕಗಳಿಂದ ವಿಜಯಪುರ ತಂಡಕ್ಕೆ ಸೋಲುಣಿಸಿತು.
ವಿಜೇತ ತಂಡಕ್ಕೆ ಪ್ರಶಸ್ತಿ ವಿತರಿಸಿದ ನಂತರ ಪರಮೇಶ್ವರ ಮಾತನಾಡಿದರು. ‘ನಾನು ₹500 ಕಳೆದುಕೊಂಡು ಬಿಟ್ಟೆ. ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಜತೆ ಬೆಟ್ಟಿಂಗ್ ಮಾಡಿಕೊಂಡಿದ್ದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.