ADVERTISEMENT

ತುಮಕೂರಿನಲ್ಲಿ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2020, 9:49 IST
Last Updated 5 ಜುಲೈ 2020, 9:49 IST
ಲಾಕ್‌ಡೌನ್ ಸಮಯದಲ್ಲಿ ತುಮಕೂರು ರಸ್ತೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು
ಲಾಕ್‌ಡೌನ್ ಸಮಯದಲ್ಲಿ ತುಮಕೂರು ರಸ್ತೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು   

ತುಮಕೂರು: ಲಾಕ್‌ಡೌನ್‌ಗೆ ತುಮಕೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ವ್ಯಾಪಾರಸ್ಥರು, ನಾಗರಿಕರು ತಮ್ಮ ಅಂಗಡಿ, ವ್ಯಾಪಾರ, ವಹಿವಾಟು, ಸಂಚಾರ ನಿಲ್ಲಿಸಿ ಲಾಕ್‌ಡೌನ್‌ಗೆ ಸ್ಪಂದಿಸಿದರು.

ಅಗತ್ಯ ಸೇವೆಗಳಾದ ಆಸ್ಪತ್ರೆ, ಹಾಲು, ಹಣ್ಣು, ತರಕಾರಿ, ಮೆಡಿಕಲ್‌ ಹೊರತು ಪಡಿಸಿ ಎಲ್ಲಾ ರೀತಿಯ ಅಂಗಡಿ, ಮಳಿಗೆಗಳು ಮುಚ್ಚಿದ್ದವು. ಮದ್ಯದಂಗಡಿ, ಕ್ಷೌರಿಕ ಅಂಗಡಿ, ಪ್ಲಾಸ್ಟಿಕ್‌, ಬಟ್ಟೆ, ಕಬ್ಬಿಣ, ಕಿರಾಣಿ, ಜ್ಯೂಸ್‌, ಬೇಕರಿ ಮಳಿಗೆಗಳು ಸಂಪೂರ್ಣ ಮುಚ್ಚಿದ್ದವು.

ಆಟೊ, ಟ್ಯಾಕ್ಸಿಗಳು ಕೂಡ ರಸ್ತೆಗಿಳಿಯಲಿಲ್ಲ. ನಗರದ ಬಿ.ಎಚ್‌.ರಸ್ತೆ, ಎಂ.ಜಿ.ರಸ್ತೆ, ಅಶೋಕ ರಸ್ತೆ, ಕುಣಿಗಲ್ ರಸ್ತೆ, ಶಿರಾ ರಸ್ತೆ, ಎಸ್‌.ಎಸ್.ಪುರಂ, ಚಿಕ್ಕಪೇಟೆ, ಮಂಡಿಪೇಟೆ, ಹೊರಪೇಟೆ, ಶೆಟ್ಟಿಹಳ್ಳಿ, ಉಪ್ಪಾರಹಳ್ಳಿ ಹೀಗೆ ನಗರದ ಪ್ರಮುಖ ರಸ್ತೆಗಳು ಸಂಪೂರ್ಣ ಸ್ತಬ್ಧವಾಗಿದ್ದವು. ಅಲ್ಲೊಂದು ಇಲ್ಲೊಂದು ವಾಹನಗಳು ಮಾತ್ರವೇ ಸಂಚರಿಸಿದವು.

ADVERTISEMENT

ಶನಿವಾರವೇ ಖರೀದಿ: ಭಾನುವಾರ ಲಾಕ್‌ಡೌನ್‌ ಇರುವ ಬಗ್ಗೆ ಮೊದಲೇ ತಿಳಿದಿದ್ದ ಅನೇಕರು ತಮಗೆ ಬೇಕಾದ ವಸ್ತುಗಳನ್ನು ಶುಕ್ರವಾರ, ಶನಿವಾರವೇ ಖರೀದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.