ADVERTISEMENT

ತುಮಕೂರು: ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜ್ ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ 2019

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2019, 10:53 IST
Last Updated 21 ಮಾರ್ಚ್ 2019, 10:53 IST
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಜಿ.ಎಸ್.ಬಸವರಾಜ್ ನಾಮಪತ್ರ ಸಲ್ಲಿಸಿದರು. –ಪ್ರಜಾವಾಣಿ ಚಿತ್ರ
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಜಿ.ಎಸ್.ಬಸವರಾಜ್ ನಾಮಪತ್ರ ಸಲ್ಲಿಸಿದರು. –ಪ್ರಜಾವಾಣಿ ಚಿತ್ರ   

ತುಮಕೂರು: ಬಿಜೆಪಿ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷ ಅಧಿಕೃತ ಘೋಷಣೆ ಮಾಡಿಲ್ಲ. ಆದರೆ, ಗುರುವಾರ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಜಿ.ಎಸ್. ಬಸವರಾಜ್ ನಾಮಪತ್ರ ಸಲ್ಲಿಸಿದರು.

ಮಧ್ಯಾಹ್ನ ಚುನಾವಣಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಪಕ್ಷದ ವರಿಷ್ಠರು ಟಿಕೆಟ್ ಖಾತ್ರಿ ಮಾಡಿರುವುದರಿಂದ ನಾಮಪತ್ರ ಸಲ್ಲಿಸಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ADVERTISEMENT

ಬಸವರಾಜ್ ಅವರು ಸಾಯಿಬಾಬಾ ಭಕ್ತರು. ಗುರುವಾರ ದಿನ ಒಳ್ಳೆಯದಿದೆ ಎಂಬ ಕಾರಣಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷ ಅಧಿಕೃತ ಘೋಷಣೆ ಬಳಿಕ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.