ADVERTISEMENT

ತುಮಕೂರು: ರಸ್ತೆ ಮಧ್ಯೆಯೇ ಹೊತ್ತಿ ಉರಿದ ಲಾರಿ

​ಪ್ರಜಾವಾಣಿ ವಾರ್ತೆ
Published 4 ಮೇ 2025, 14:36 IST
Last Updated 4 ಮೇ 2025, 14:36 IST
ತುಮಕೂರಿನ ಕ್ಯಾತ್ಸಂದ್ರದ ಬಳಿ ಹೊತ್ತಿ ಉರಿದ ಲಾರಿ
ತುಮಕೂರಿನ ಕ್ಯಾತ್ಸಂದ್ರದ ಬಳಿ ಹೊತ್ತಿ ಉರಿದ ಲಾರಿ   

ತುಮಕೂರು: ನಗರದ ಕ್ಯಾತ್ಸಂದ್ರ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ಚಲಿಸುತ್ತಿದ್ದ ಲಾರಿಯ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ರಸ್ತೆ ಮಧ್ಯೆಯೇ ಹೊತ್ತಿ ಉರಿದಿದೆ.

ದಾಬಸ್‌ಪೇಟೆಯಿಂದ ವಸಂತನರಸಾಪುರದ ಕಡೆಗೆ ತೆರಳುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ತಕ್ಷಣಕ್ಕೆ ಲಾರಿಯಿಂದ ಕೆಳಗಡೆ ಇಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಲಾರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT