ADVERTISEMENT

ಸೋಂಕು ತಡೆಗೆ ಶ್ರಮ, ಆರೋಗ್ಯ ಕಾಪಾಡಿಕೊಳ್ಳಿ: ಡಿ.ಸಿ.ಗೌರಿಶಂಕರ್

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2020, 14:42 IST
Last Updated 3 ಏಪ್ರಿಲ್ 2020, 14:42 IST
ಆಶಾ ಕಾರ್ಯಕರ್ತೆಯರು, ಪೊಲೀಸರಿಗೆ ಶಾಸಕ ಗೌರಿಶಂಕರ್ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದರು
ಆಶಾ ಕಾರ್ಯಕರ್ತೆಯರು, ಪೊಲೀಸರಿಗೆ ಶಾಸಕ ಗೌರಿಶಂಕರ್ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದರು   

ತುಮಕೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರದ ಆದೇಶಗಳನ್ನು ಜನರು ಪಾಲಿಸಬೇಕು. ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿರುವವರು ಸಹ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಶಾಸಕ ಡಿ.ಸಿ.ಗೌರಿಶಂಕರ್ ಸಲಹೆ ನೀಡಿದರು.

ತಾಲ್ಲೂಕಿನ ನಿಡವಳಲು ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು, ಪೊಲೀಸರು, ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ 50 ಸಾವಿರ ಮಾಸ್ಕ್, 2,500 ಸ್ಯಾನಿಟೈಸರ್ ಹಾಗೂ ನೀರಿನ ಬಾಟಲಿಗಳನ್ನು ವಿತರಿಸಿ ಮಾತನಾಡಿದರು.

ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಚಾರವಾಗಿ ಅಧಿಕಾರಿಗಳು ಜನರನ್ನು ಉತ್ತೇಜಿಸಬೇಕು. ಆಹಾರ ಇಲಾಖೆಯಿಂದ ವಿತರಿಸುವ ಪಡಿತರವನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ಯಾವುದೇ ಕಾರಣಕ್ಕೂ ಜನರು ಗುಂಪು ಸೇರದಂತೆ ನಿಗಾ ಇಡಬೇಕು ಎಂದು ತಿಳಿಸಿದರು.

ADVERTISEMENT

ಜೆಡಿಎಸ್ ಗ್ರಾಮಾಂತರ ಘಟಕದ ಅಧ್ಯಕ್ಷ ಹಾಲನೂರು ಅನಂತ್‍ಕುಮಾರ್, ವಿಷ್ಣುವರ್ಧನ್ ಹಾಗೂ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.