ADVERTISEMENT

ತುಮಕೂರು | ಲಂಚ ಆರೋಪ ಸಾಬೀತು: ಗ್ರಾಮ ಲೆಕ್ಕಾಧಿಕಾರಿಗೆ 4 ವರ್ಷ ಕಠಿಣ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 18:17 IST
Last Updated 1 ಆಗಸ್ಟ್ 2025, 18:17 IST
(ಸಾಂದರ್ಭಿಕ ಚಿತ್ರ)
(ಸಾಂದರ್ಭಿಕ ಚಿತ್ರ)   

ತುಮಕೂರು: ಲಂಚ ತೆಗೆದುಕೊಂಡ ಆರೋಪ ಸಾಬೀತಾದ ಕಾರಣ ಕುಣಿಗಲ್ ತಾಲ್ಲೂಕು ಹುತ್ರಿದುರ್ಗ ಹೋಬಳಿ ಇಪ್ಪಾಡಿ ಕಂದಾಯ ವೃತ್ತದ ಗ್ರಾಮ ಲೆಕ್ಕಾಧಿಕಾರಿ ಕೆ.ಬಿ.ಲೋಕೇಶ್ ಎಂಬಾತನಿಗೆ ನಾಲ್ಕು ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹20 ಸಾವಿರ ದಂಡ ವಿಧಿಸಿ ಏಳನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

ಇಪ್ಪಾಡಿ ಗ್ರಾಮದ ಐ.ಜಿ.ಸತೀಶ್ ಎಂಬುವರ ತಾಯಿ ಹಾಗೂ ದೊಡ್ಡಪ್ಪನ ಹೆಸರಿಗೆ ಜಮೀನಿನ ಪೌತಿ ಖಾತೆ ಮಾಡಿಕೊಡಲು ಗ್ರಾಮ ಲೆಕ್ಕಾಧಿಕಾರಿ ಕೆ.ಬಿ.ಲೋಕೇಶ್‌ ₹20 ಸಾವಿರ ಲಂಚಕ್ಕೆ ಒತ್ತಾಯಿಸಿದ್ದರು. ಮುಂಗಡವಾಗಿ ₹10 ಸಾವಿರ ಪಡೆದುಕೊಂಡಿದ್ದರು. ಉಳಿದ ₹10 ಸಾವಿರ ಹಣವನ್ನು 2021 ಜನವರಿ 7ರಂದು ಕುಣಿಗಲ್ ಪಟ್ಟಣದಲ್ಲಿ ಪಡೆದುಕೊಳ್ಳುವ ಸಮಯದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು.

ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆ ಇನ್‌ಸ್ಟೆಕ್ಟರ್ ಎಸ್.ವಿಜಯಲಕ್ಷ್ಮಿ, ಲೋಕಾಯುಕ್ತ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ವೈ.ಸತ್ಯನಾರಾಯಣ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಯಾಸ್ಮಿನ ಪರವೀನ ಲಾಡಖಾನ ಅವರು ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ಲೋಕಾಯುಕ್ತರ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಆರ್.ಪಿ.ಪ್ರಕಾಶ್ ವಾದ ಮಂಡಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.